ರಾಜ್ಯದಲ್ಲಿ ಲೋಕಸಭಾ ಚುನಾವಣೆ ರಂಗೇರಿದೆ. ಬಿಜಿಪಿ ಹಾಗೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಪಕ್ಷಗಳ ನಡುವೆ ಭಾರೀ ಜಿದ್ದಾಜಿದ್ದಿ ಏರ್ಪಟ್ಟಿದ್ದು, ತಮ್ಮ-ತಮ್ಮ ಅಭ್ಯರ್ಥಿಗಳ ಗೆಲುವಿಗೆ ಕಸರತ್ತು ನಡೆಸಿವೆ. ಇದಕ್ಕಾಗಿ ಜೆಡಿಎಸ್ ತನ್ನ ಸ್ಟಾರ್ ಪ್ರಚಾರಕನ್ನ ನೇಮಿಸಿದೆ.
ಬೆಂಗಳೂರು, (ಏ.02): ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಘೋಷಣೆ ಬೆನ್ನಲ್ಲೇ ಸ್ಥಳೀಯ ಜೆಡಿಎಸ್ ಕೂಡಾ ಲೋಕಸಭಾ ಚುನಾವಣೆಗೆ ತನ್ನ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆಮಾಡಿದೆ.
ಹಾಲಿ ಸಚಿವರು, ಶಾಸಕರು, ಮಾಜಿ ಶಾಸಕರು, ಪದಾಧಿಕಾರಿಗಳು ಸೇರಿದಂತೆ 40 ಜನರ ಸ್ಟಾರ್ ಪ್ರಚಾರಕರ ಪಟ್ಟಿ ರಿಲೀಸ್ ಆಗಿದ್ದು, ಇವರು ಜೆಡಿಎಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.
ರಾಜ್ಯದಲ್ಲಿ ಪ್ರಿಯಾಂಕಾ ಗಾಂಧಿ ಸೇರಿ 40 ಮಂದಿ ಸ್ಟಾರ್ ಪ್ರಚಾರಕರು: ಇಲ್ಲಿದೆ ಪಟ್ಟಿ!
ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಸಿಎಂ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್, ಹೆಚ್.ಡಿ ರೇವಣ್ಣ, ಅನಿತಾ ಕುಮಾರಸ್ವಾಮಿ, ಭವಾನಿ ರೇವಣ್ಣ, ಸೂರಜ್ ರೇವಣ್ಣ ಸೇರಿದಂತೆ ಚುನಾವಣಾ ಕಣದಲ್ಲಿ ಸ್ಪರ್ಧೆಗಿಳಿದಿರುವ ನಿಖಿಲ್, ಪ್ರಜ್ವಲ್ ಕೂಡ ಸ್ಟಾರ್ ಪ್ರಚಾರಕರಾಗಿದ್ದಾರೆ.

