ಮಂಡ್ಯ ಲೋಕಸಭಾ ಕಣ ರಂಗೇರಿದ್ದು, ಪಕ್ಷೇತರ ಅಭ್ಯರ್ಥಿ ಸುಮಲತಾ ಹಾಗೂ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ನಡುವೆ ನೆಕ್ ಟು ನೆಕ್ ಫೈಟ್ ಏರ್ಪಟ್ಟಿದೆ. ಇದರ ಮಧ್ಯೆ ಆರೋಪ-ಪ್ರತ್ಯಾರೋಪಗಳ ಜತೆ ದೂರು-ಪ್ರತಿ ದೂರು ನೀಡುವುದು ಜೋರಾಗಿದ್ದು, ಇದೀಗ ಸುಮಲತಾ ವಿರುದ್ಧ ಜೆಡಿಎಸ್ ಚುನಾವಣಾ ಆಯೋಗದ ಮೆಟ್ಟಿಲೇರಿದೆ. 

ಮೈಸೂರು,[ಏ.05]: ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ವಿರುದ್ಧ ಜೆಡಿಎಸ್,​ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. 

ಜೆಡಿಎಸ್​ನ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್​, ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ಅಂಬರೀಶ್, ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. 

ಅಣ್ಣ ನಮ್ಮವನಾದರೆ ಅತ್ತಿಗೆ ನಮ್ಮವಳಾ? ವೈರಲ್ ಆಯ್ತು ಸುಮಲತಾ ವಿರುದ್ಧ ಹಾಡು

ಎ.ಸುಮಲತಾ ಅವರು ನಟಿಸಿರುವ ‘ಹಿಂದೂಸ್ತಾನ್ ಗೋಲ್ಡ್​ ಕಂಪೆನಿ’ ಎಂಬ ಜಾಹೀರಾತನ್ನು ಹಲವಾರು ಖಾಸಗಿ ವಾಹಿನಿಗಳಲ್ಲಿ ಪ್ರಸಾರ ಮಾಡಲಾಗುತ್ತಿದ್ದು, ಇದು ಚುನಾವಣಾ ನೀತಿ ಸಂಹಿತಿಯನ್ನ ಉಲ್ಲಂಘನೆ ಮಾಡಿದಂತೆ. 

ಈ ಮೂಲಕ ಮತದಾರರನ್ನು ಸೆಳೆಯಲು ಪ್ರಯತ್ನಿಸುತ್ತಿರುವುದರಿಂದ ಇದು ಪರೋಕ್ಷವಾಗಿ ಪ್ರತಿ ಸ್ಪರ್ಧಿಗಳ ಮೇಲೆ ಪರಿಣಾಮ ಬೀರುತ್ತಿದೆ. ಆದ್ದರಿಂದ ಅವರ ವಿರುದ್ಧ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ದೂರಿನಲ್ಲಿ ಆಗ್ರಹಿಸಿದ್ದಾರೆ.