ಶಿವಮೊಗ್ಗ(ಏ.22): ಮಾಜಿ ಶಾಸಕ, ಜೆಡಿಎಸ್ ಮುಖಂಡ ಅಪ್ಪಾಜಿ ಗೌಡ ಅವರ ಪುತ್ರ ಅಜಿತ್ ಕುಮಾರ್ ಮತದಾರರಿಗೆ ಹಣ ಹಂಚುತ್ತಿದ್ದಾಗಲೇ ಆದಾಯ ತೆರಿಗೆ (ಐಟಿ) ಇಲಾಖೆ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾರೆ.

ಭದ್ರಾವತಿಯ ಎಂಪಿಎಂ ಬಳಿಯ ಸುರಗಿ ತೋಪಿನಲ್ಲಿ ಅಜಿತ್ ಕುಮಾರ್ ಹಣ ಹಂಚುತ್ತಿದ್ದರು. ಈ ಕುರಿತು ಐಟಿ ಅಧಿಕಾರಿಗಳಿಗೆ ಖಚಿತ ಮಾಹಿತಿ ಸಿಕ್ಕಿತ್ತು. 

ಕೂಡಲೇ ಎಂಪಿಎಂ ಠಾಣೆಯ ಪೊಲೀಸರ ಸಹಕಾರದಿಂದ ದಾಳಿ ಮಾಡಿದ ಅಧಿಕಾರಿಗಳು 1.39 ಲಕ್ಷ ರೂ. ನಗದು ಹಣವನ್ನು ಜಪ್ತಿ ಮಾಡಿದ್ದಾರೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏ.18ರಂದು ಮುಗಿದಿದ್ದು,ಏ.23ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.