ಹಾಸನ : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ಹಾಸನದಲ್ಲಿ  ದೇವೇಗೌಡರ ಕುಟುಂಬದ ವಿರುದ್ಧ ಅಸಮಾಧಾನ ಹೆಚ್ಚಾಗುತ್ತಿದೆ. 

ಕುಟುಂಬ ರಾಜಕಾರಣ ನಡೆಸುತ್ತಿದ್ದಾರೆ ಎಂದು ಹಾಸನದಿಂದ ಪ್ರಜ್ವಲ್ ಸ್ಪರ್ಧೆಗೆ ಜೆಡಿಎಸ್ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗುತ್ತಿದೆ. 

ಪ್ರಜ್ವಲ್ ಸ್ಪರ್ಧೆ ಕಾರಣಕ್ಕಾಗಿ ಮುನಿಸಿಕೊಂಡ ಜೆಡಿಎಸ್ ಕಾರ್ಯಕರ್ತರು ಮುನಿಸಿಕೊಂಡಿದ್ದು, ಇದೇ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿಯಾಗಿರುವ ಡ. ಮಂಜು ಭೇಟಿ ಮಾಡುತ್ತಿದ್ದಾರೆ. 

ಅಲ್ಲದೇ ಜೆಡಿಎಸ್ ನ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಹಾಸನ ಅಭ್ಯರ್ಥಿಯಾಗಿರುವ ಎ ಮಂಜುಗೆ ಬೆಂಬಲ ನೀಡಲಿದ್ದಾರೆ ಎನ್ನಲಾಗಿದೆ. 

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ