ಹಾಸನ :  ಲೋಕಸಭಾ  ಚುನಾವಣೆ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದೆ. ಇತ್ತ ಹಾಸನ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಗೆಲುವಿನತ್ತ ದಾಪುಗಾಲು ಇಡುತ್ತಿದ್ದಾರೆ. 

ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಬಿಜೆಪಿ ಅಭ್ಯರ್ಥಿ ಎ. ಮಂಜು ವಿರುದ್ಧ 90 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 

ಸದ್ಯ ಪ್ರಜ್ವಲ್ ರೇವಣ್ಣ 3,73, 825 ಮತಗಳನ್ನು ಪಡೆದಿದ್ದರೆ ಬಿಜೆಪಿ ಅಭ್ಯರ್ಥಿ ಎ.ಮಂಜು - 2,92, 715 ಮತಗಳನ್ನು ಪಡೆದುಕೊಂಡಿದ್ದಾರೆ. 

ರಾಜ್ಯದಲ್ಲಿ ಒಂದೇ ಸ್ಥಾನದಲ್ಲಿ ಜೆಡಿಎಸ್ ಮುನ್ನಡೆ ಕಾಯ್ದುಕೊಂಡಿದ್ದು, ಸದ್ಯ ಸಂಸತ್ ಪ್ರವೇಶಿಸುವ ಪ್ರಜ್ವಲ್ ಆಸೆ ಈಡೇರುವ ಲಕ್ಷಣಗಳು ಕಂಡುಬರುತ್ತಿವೆ.