ಶಿವಮೊಗ್ಗ, (ಮಾ.17): ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯೊಂದಿಗೆ ಲೋಕಸಭಾ ಚುನಾವಣೆ ಎದುರಿಸಲು ಈಗಾಗಲೇ ನಿರ್ಧರಿಸಿವೆ.ಅದರಂತೆ ಕಾಂಗ್ರೆಸ್ 28 ಲೋಕಸಭಾ ಕ್ಷೇತ್ರಗಳ ಪೈಕಿ 8 ಕ್ಷೇತ್ರಗಳನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ.

ಹಾಸನ, ಮಂಡ್ಯ, ವಿಜಯಪುರ, ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು, ಶಿವಮೊಗ್ಗ ತುಮಕೂರು ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಗಳು ಜೆಡಿಎಸ್ ಪಾಲಾಗಿವೆ.
ದೇವೇಗೌಡ್ರ ಪರಮಾಪ್ತ ಪಕ್ಷ ಬಿಟ್ಟ ಹಿಂದಿನ ಲೆಕ್ಕಾಚಾರವನ್ನು ಬಿಚ್ಚಿಟ್ಟ HDK

ಈ ಎಂಟರಲ್ಲಿ ಜೆಡಿಎಸ್ ಈಗಾಗಲೇ ತನ್ನ ಪಾಲಿನ ಮೂರು ಕ್ಷೇತ್ರಗಳಿಗೆ ಮೈತ್ರಿಕೂಟದ ಅಭ್ಯರ್ಥಿಗಳನ್ನು ಘೋಷಿಸಿದೆ. ಹಾಸನದಿಂದ ಪ್ರಜ್ವಲ್ ರೇವಣ್ಣ ಹಾಗೂ ಮಂಡ್ಯದಿಂದ ನಿಖಿಲ್ ಕುಮಾರಸ್ವಾಮಿ ಅಭ್ಯರ್ಥಿ ಎಂದು ಈಗಾಗಲೇ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಘೋಷಣೆ ಮಾಡಿದ್ದಾರೆ.

ಇಂದು [ಭಾನುವಾರ] ಶಿವಮೊಗ್ಗ ನಡೆದ ಕಾರ್ಯಕರ್ತರ ಸಭೆಯಲ್ಲಿ  ಮತ್ತೊಂದು ಕ್ಷೇತ್ರದ ಅಭ್ಯರ್ಥಿ ಹೆಸರನ್ನು ಅಧಿಕೃತವಾಗಿ ಪ್ರಕಟಿಸಿದರು. ಮಧುಬಂಗಾರಪ್ಪ ಅವರೇ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮೈತ್ರಿಕೂಟ ಅಭ್ಯರ್ಥಿ ಎಂದು ದೊಡ್ಡಗೌಡ್ರು ಘೋಷಣೆ ಮಾಡಿದರು.

ಈ ಮೂಲಕ ಜೆಡಿಎಸ್ ತನ್ನ ಪಾಲಿನ 8 ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳ ಅಭ್ಯರ್ಥಿ ಹೆಸರನ್ನು ಘೋಷಿಸಿದ್ದು, ಇನ್ನು ಐದು ಕ್ಷೇತ್ರಗಳಿಗೆ ಅಭ್ಯರ್ಥಿ  ಹೆಸರು ಪ್ರಕಟಿಸುವುದು ಮಾತ್ರ ಬಾಕಿ ಇದೆ.