ಮೈಸೂರು : ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು, ಅಭ್ಯರ್ಥಿಗಳು ಚುನಾವಣಾ ಫಲಿತಾಂಶಕ್ಕಾಗಿ ಕಾಯುತ್ತಿರುವ ಈ ಸಂದರ್ಭದಲ್ಲಿ  ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ಮತ ಹಾಕಿದ್ದಾರೆ ಎನ್ನುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

"

ಮೈಸೂರು- ಕೊಡಗು ಲೋಕಸಭಾ ಚುನಾವಣೆಯಲ್ಲಿ ನಾವು ಒಟ್ಟಿಗೆ ಕೆಲಸ ಮಾಡಬೇಕಿತ್ತು. ಮೈತ್ರಿಯಲ್ಲಿ ತಪ್ಪಾಗಿದ್ದು, ಜೆಡಿಎಸ್- ಕಾಂಗ್ರೆಸ್ ಜಿದ್ದಾಜಿದ್ದಿನ ಚುನಾವಣೆ ನಡೆಸಿದ್ದವು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನವರು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ.  ಆದರೆ ಜೆಡಿಎಸ್‌ನವರು ಬಿಜೆಪಿಗೆ ವೋಟ್ ಹಾಕಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ಹೇಳಿದ್ದಾರೆ. 

ಇಲ್ಲಿನ ಉದ್ಬೂರು ಗ್ರಾಮ ಪಂಚಾಯಿತಿ ಸೇರಿದಂತೆ ಕೆಲವು ಕಡೆ ಈ ರೀತಿ ಮತದಾನವಾಗಿದೆ ಎಂದು ಮೈಸೂರು ಕೊಡಗಿನಲ್ಲಿ ಮೈತ್ರಿಯಲ್ಲಿ ಹಿನ್ನಡೆಯಾಗಿದೆ ಎನ್ನುವುದನ್ನು ಒಪ್ಪಿಕೊಂಡಿದ್ದಾರೆ.