ವಿಜಯಪುರ(ಮಾ.26): ವಿಜಯಪುರ ಕ್ಷೇತ್ರಕ್ಕೆ ಜೆಡಿಎಸ್ ಇದುವರೆಗೂ ಅಭ್ಯರ್ಥಿ ಘೋಷಣೆಯಾಗದಿರುವುದು ತೀವ್ರ ಕುತೂಹಲ ಮೂಡಿಸಿದೆ.

ಮೂಲಗಳ ಪ್ರಕಾರ ಮೀಸಲು ಕ್ಷೇತ್ರಕ್ಕೆ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ್ ಪತ್ನಿ ಹಾಗೂ ಅವರ ಸಹೋದರ ಮಧ್ಯೆ ಪೈಪೋಟಿ ಏರ್ಪಟ್ಟಿದೆ.

ನಾಗಠಾಣ ಜೆಡಿಎಸ್ ಶಾಸಕ ದೇವಾನಂದ ಪತ್ನಿ ಮತ್ತು ಸಹೋದರರ ಮಧ್ಯೆ ಟಿಕೆಟ್ ಗಾಗಿ ಪೈಪೋಟಿ ಏರ್ಪಟ್ಟಿದ್ದು, ಮೀಸಲು ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಇದೀಗ ಬೆಂಬಲಿಗರಲ್ಲಿ ಮೂಡಿದೆ.

ಅದರಂತೆ ದೇವಾನಂ ಚ್ಹಾವಣ್ ಅವರಿಗೆ ಹೈಕಮಾಂಡ್ ಬುಲಾವ್ ನೀಡಿದ್ದು, ನಾಮಪತ್ರ ಸಲ್ಲಿಕೆ ಪ್ರಕ್ರಿಯ ಆರಂಭವಾಗಿದ್ದರೂ ಅಭ್ಯರ್ಥಿ ಘೋಷಣೆಯಾಗದಿರುವುದು ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಇಂದು ಬಹುತೇಕ ಅಭ್ಯರ್ಥಿ ಘೋಷಣೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.