ಬೆಂಗಳೂರು(ಮಾ.17): ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ಇನ್ನೂ ಉಳಿದುಕೊಂಡಿದೆ. ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆ ಎನ್ನಲಾಗುತ್ತಿದ್ದರೂ, ತುಮಕೂರು ಕ್ಷೇತ್ರದತ್ತ ಕೂಡ ದೊಡ್ಡ ಗೌಡರು ಚಿತ್ತ ಹರಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ದೇವೇಗೌಡ ನಿವಾಸದಲ್ಲಿ ಚರ್ಚೆ ನಡೆಸಿದ ಸಿಎಂ ಕುಮಾರಸ್ವಾಮಿ ಮತ್ತು ಹೆಚ್.ಡಿ.ರೇವಣ್ಣ, ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಮಾತುಕತೆ ನಡೆಸಿದ್ದಾರೆ.

"

ಈ ಮಧ್ಯೆ ಮಿತ್ರಪಕ್ಷ ಕಾಂಗ್ರೆಸ್ ಹೊಸ ಬೇಡಿಕೆ ಮುಂದಿಟ್ಟಿದ್ದು, ಒಂದು ವೇಳೆ ದೇವೆಗೌಡ ತುಮಕೂರು ಕ್ಷೇತ್ರದಿಂಧ ಸ್ಪರ್ಧೆ ಮಾಡದಿದ್ದರೆ ಅದನ್ನು ಮರಳಿ ಕಾಂಗ್ರೆಸ್‌ಗೆ ಕೊಡುವಂತೆ ಕೋರಿದೆ.

ದೇವೇಗೌಡ ತುಮಕೂರು ಕ್ಷೇತ್ರದಿಂದ ಸ್ಪರ್ಧೆ ಮಾಡದಿದ್ದರೆ ಕ್ಷೇತ್ರದಲ್ಲಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಆದರೆ ಈ ಕುರಿತು ಜೆಡಿಎಸ್ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.