ಬೆಂಗಳೂರು, [ಮೇ.19]: ನಾವು 300 ಸೀಟು ಗೆಲ್ತೇವೆ ಅಂತ ಪ್ರಧಾನಿ ಹೇಳಿದ್ದರು. ನಾವು ಇನ್ನೂ ಹೆಚ್ಚು ಸ್ಥಾನ ಗೆಲ್ತೇವೆ. ಮೋದಿಯವರು ಪ್ರಧಾನಿ ಆಗುವುದು ನಿಶ್ಚಿತ. ರಾಜ್ಯದಲ್ಲಿ 22 ಸೀಟು ಗೆಲ್ಲೋದು ನಿಶ್ಚಿತ. ಎಲ್ಲ ಸಮೀಕ್ಷೆಗಳಲ್ಲಿಯೂ ಇದು ಸ್ಪಷ್ಟವಾಗಿದೆ ಎಂದು ಹೇಳಿದರು.

ಮೊದಲಿಗೆ ರಾಜ್ಯದಲ್ಲಿ 22 ಸೀಟು ಗೆಲ್ಲುತ್ತೇವೆ ಎಂದು ನಂಬಿರಲಿಲ್ಲ. ನಮ್ಮ ಹೋರಾಟಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ. ಎರಡು ಉಪಚುನಾವಣೆಯಲ್ಲೂ10 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ. ಮೇ 23ರಂದು ವಾಸ್ತವಿಕ ಸತ್ಯ ಎಲ್ಲರಿಗೂ ಗೊತ್ತಾಗಲಿದೆ ಎಂದು ಬಿಎಸ್‌ವೈ ವಿಶ್ವಾಸ ವ್ಯಕ್ತಪಡಿಸಿದರು.

ಇನ್ನು ಇವಿಎಮ್ ಮಷಿನ್‌ನಲ್ಲೇ ದೋಷವಿದೆ ಎಂದು ಮಮತಾ ಬ್ಯಾನರ್ಜಿ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಬಿಎಸ್‌ವೈ, ಯಾರಿಗೆ ಚುನಾವಣೆ ಸೋಲು ಒಪ್ಪಿಕೊಳ್ಳೋಕೆ ಆಗಲ್ಲ. ಅವರು ಇಂಥ ಮಾತನ್ನ ಹೇಳುತ್ತಾರೆ. 

ಮಮತಾ ಅಧಿಕಾರ ದುರುಪಯೋಗ ಮಾಡಿಕೊಂಡಿದ್ದಾರೆ. ಅಮಿತ್ ಶಾ ರ್ಯಾಲಿಗೂ ಭದ್ರತೆಯನ್ನ ನೀಡಿರಲಿಲ್ಲ. ಹತಾಶರಾಗಿ ಅವರು ಇಂಥ ಆರೋಪ ಮಾಡಿದ್ದಾರೆ ಎಂದರು.