ಬಳ್ಳಾರಿ : ಲೋಕಸಭಾ ಚುನಾವಣೆಯ ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು ಸ್ಫೋಟಕ ಹೇಳಿಕೆ ನೀಡುತ್ತಿದ್ದಾರೆ. 

ಚುನಾವಣೆ ಬಳಿಕ ರಾಜ್ಯದಲ್ಲಿ ಸ್ಫೋಟವಾಗಲಿದ್ದು, ಈ ಸ್ಫೋಟಕ್ಕೆ  ರಾಜ್ಯ ಸರ್ಕಾರ ದೂಳಿಪಟವಾಗಲಿದೆ ಎಂದು ಬಿಜೆಪಿ ಮುಖಂಡ ಶ್ರೀರಾಮುಲು ಹೊಸ ಬಾಂಬ್ ಸಿಡಿಸಿದ್ದಾರೆ. 

ಸ್ಫೋಟವಾದರೆ ಅನಿವಾರ್ಯವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ರಾಜೀನಾಮೆ ನೀಡಲೇಬೇಕು. ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ನಮಗೆ ಬೆಂಬಲ ನೀಡಿದರೆ ಸ್ವಾಗತ ಎಂದು ಹೇಳಿದ್ದಾರೆ. 

ಚುನಾವಣೆ ಬಳಿಕ ರಮೇಶ್ ಜಾರಕಿಹೊಳಿ 10 ಶಾಸಕರೊಂದಿಗೆ ರಾಜೀನಾಮೆ ನೀಡಲಿದ್ದಾರೆ ಎಂದು ಬೆಳಗಾವಿಯಲ್ಲಿ ಬಿಜೆಪಿ ಮುಖಂಡರೋರ್ವರು ನೀಡಿದ ಹೇಳಿಕೆ ಬೆನ್ನಲ್ಲೆ ಶ್ರೀ ರಾಮುಲು  ಅವರು ಸರ್ಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. 

ನಾವು ಯಾರನ್ನೂ ಕೂಡ ನಮ್ಮ ಪಕ್ಷಕ್ಕೆ ಕರೆಯುವುದಿಲ್ಲ.  ಶಾಸಕರೇ ನಮ್ಮ ಹತ್ತಿರ ಬರುತ್ತಾರೆ ಎಂದು ಶ್ರೀ ರಾಮುಲು ಸುವರ್ಣ ನ್ಯೂಸ್.ಕಾಂ ಗೆ ತಿಳಿಸಿದ್ದಾರೆ.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂಧು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28