ಬೆಳಗಾವಿ, (ಮಾ.29):  ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹೆಸರು ಪ್ರಕಟವಾಗುತ್ತಿದ್ದಂತೆಯೇ ಜಿಲ್ಲೆಯಲ್ಲಿ ಅಸಮಾಧಾನ ಸ್ಫೋಟಗೊಂಡಿದೆ.

ಚಿಕ್ಕೋಡಿ-ಸದಲಗಾ ಲೋಕಸಭಾ ಕ್ಷೇತ್ರದ ಟಿಕೆಟ್‌ಗಾಗಿ ಬಿಜೆಪಿಯಲ್ಲಿ ಭರ್ಜರಿ ಪೈಪೋಟಿ ನಡೆದಿತ್ತು. ಈ ಎಲ್ಲವುಗಳನ್ನು ಅಳೆದು ತೂಗಿ ಅಣ್ಣಾ ಸಾಹೇಬ್ ಜೊಲ್ಲೆ ಅವರನ್ನು ಅಂತಿಮಗೊಳಿಸಿ ಬಿಜೆಪಿ ಪ್ರಕಟಿಸಿದೆ.

ಕರ್ನಾಟಕದ 3 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರು ಪ್ರಕಟ

ಇದ್ರಿಂದ ಬಿಜೆಪಿಯಲ್ಲಿ ಭಿನ್ನಮತ ಹೊಗೆ ಕಾಣಿಸಿಕೊಂಡಿದ್ದು, ಶಾಸಕ ಉಮೇಶ ಕತ್ತಿ, ಬಿಜೆಪಿ ಹೈಕಮಾಂಡ್ ವಿರುದ್ಧ ಅಸಮಾಧಾನಗೊಂಡಿದ್ದಾರೆ.

ಚಿಕ್ಕೋಡಿ ಕ್ಷೇತ್ರದಿಂದ ಸ್ಪರ್ಧಿಸಲು ಮಾಜಿ ಸಚಿವ ಉಮೇಶ್ ಕತ್ತಿ ಸೋದರ ರಮೇಶ್ ಕತ್ತಿ ಪ್ರಬಲ ಆಕಾಂಕ್ಷಿಯಾಗಿದ್ದರು.  ಆದ್ರೆ ಕೊನೆಗಳಿಗೆಯಲ್ಲಿ ಅವರಿಗೆ ಟಿಕೆಟ್ ಕೈತಪ್ಪಿದೆ.

ಈ ಹಿನ್ನೆಯಲ್ಲಿ ಕತ್ತಿ ಬ್ರದರ್ಸ್ ಯಾರ ಸಂಪರ್ಕಕ್ಕೂ ಸಿಗದೇ ತೆರೆ ಮರೆಗೆ ಸರಿದಿದ್ದು, ಮುಂದಿನ ನಡೆ ಬಗ್ಗೆ ಪ್ಲಾನ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಪಕ್ಷದ ವಿರುದ್ದ ಬಂಡಾಯದ ಬಾವುಟ ಹಾರಿಸಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಾರಾ ಎನ್ನುವ ಸಂಶಯಗಳು ವ್ಯಕ್ತವಾಗುತ್ತಿವೆ.