ಬೆಳಗಾವಿ(ಏ. 23)  ರಮೇಶ ಜಾರಕಿಹೊಳಿ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡುವುದರ ಕುರಿತು ನನಗೆ ಗೊತ್ತಿಲ್ಲ ಅವರು ರಾಜೀನಾಮೆ ನೀಡಿದ ಬಳಿಕ ಮಾತನಾಡುತ್ತೇನೆ ಎಂದು ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಹಿಂಡಲಗಾ ವಿಜಯನಗರದಲ್ಲಿ  ಮಂಗಳವಾರ ಕುಟುಂಬಸ್ಥರೊಂದಿಗೆ ಆಗಮಿಸಿ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ  ಮಾತನಾಡಿ,  ಮಾಜಿ ಸಚಿವ ರಮೇಶ ಜಾರಕಿಹೊಳಿ ರಾಜೀನಾಮೆ ನೀಡುತ್ತಿರುವ ವಿಷಯ ನನಗೆ ಗೊತ್ತಿಲ್ಲ. ಅವರು ಸದ್ಯ ಕಾಂಗ್ರೆಸ್‌ನಲ್ಲಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಮಾತನಾಡುತ್ತೇನೆ ಎಂದರು.

ಕಾಂಗ್ರೆಸ್ ಗೊಂದಲಗಳಿಗೆ ಯಾರು ಮೂಲ? ಪತ್ತೆ ಹಚ್ಚಿದ ರಮೇಶ್ ಜಾರಕಿಹೊಳಿ

ರಮೇಶ ಜಾರಕಿಹೊಳಿ ಅವರು ಬಿಜೆಪಿ ಹೊಗುತ್ತಾರೆ ಎಂಬು ಮಾಹಿತಿ ನನಗೆ ಇಲ್ಲ. ಅವರು ಹೋದ ನಂತರ ನಮ್ಮ ಪಕ್ಷದ ಪರವಾಗಿ ಅವರ ಬಗ್ಗೆ ಮಾತನಾಡುವುದು ಸರಿ ಎಂದು ಹೆಬ್ಬಾಳ್ಕರ್ ಹೇಳಿದರು.

ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ರಮೇಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಭಿನ್ನಾಭಿಪ್ರಾಯ ಎದುರಾಗಿತ್ತು. ನಂತರ ನಡೆದ ಹಲವಾರು ರಾಜಕಾರಣದ ಬೆಳವಣಿಗೆಗಳು ಇಡೀ ರಾಜ್ಯದ ಕುತೂಹಲಕ್ಕೆ ಕಾರಣವಾಗಿದ್ದವು.

ದೇಶದಲ್ಲಿ ಏ.11ರಿಂದ ಮೇ.19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.