ತುಮಕೂರು(ಮಾ.24): ತುಮಕೂರು ಕ್ಷೇತ್ರದಲ್ಲಿ ಜೆಡಿಎಸ್ ಗೆ ಬೆಂಬಲ ನೀಡಿದ ಕಾಂಗ್ರೆಸ್‌ಗೆ ಸ್ವಪಕ್ಷೀಯರಿಂದಲೇ ಭಾರೀ ವಿರೋಧ ವ್ಯಕ್ತವಾಗಿದೆ. ತುಮಕೂರು ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಟ್ಟಿದ್ದಕ್ಕೆ ಕಾಂಗ್ರೆಸ್‌ನಲ್ಲಿ ಭಿನ್ನಮತ ಭುಗಿಲೆದ್ದಿದೆ.

ತುಮಕೂರಿನಲ್ಲಿ ಇಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ನಡೆದ ಬ್ಲಾಕ್ ಕಾಂಗ್ರೆಸ್ ಸಮಿತಿ ಸಭೆಯಲ್ಲಿ, ಮುದ್ದ ಹನಮೇಗೌಡರ ಸ್ಪರ್ಧೆಗೆ ಒತ್ತಾಯ ಕೇಳಿ ಬಂದಿದೆ.

ಈ ಕುರಿತು ಸುವರ್ಣನ್ಯೂಸ್ ಜೊತೆ ಮಾತನಾಡಿದ ತುಮಕೂರು ಜಿಲ್ಲಾ ಕಾಂಗ್ರೆಸ್ ನಾಯುಕ ರಾಯಸಂದ್ರ ರವಿಕುಮಾರ್, ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಟ್ಟಿದ್ದಕ್ಕೆ ಕಾರ್ಯಕರ್ತರಲ್ಲಿ ಅಸಮಾಧಾನವಿದೆ ಎಂದು ತಿಳಿಸಿದ್ದಾರೆ.

"

ಅಲ್ಲದೇ ಒಂದು ವೇಳೆ ಮುದ್ದ ಹನಮೇಗೌಡರಿಗೆ ಟಿಕೆಟ್ ನೀಡದೇ ಹೋದಲ್ಲಿ ಅವರನ್ನು ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಸುವುದಾಗಿಯೂ ರವಿ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಇದ್ದ ಕ್ಷೇತ್ರಗಳನ್ನು ಮೊಮ್ಮಕ್ಕಳಿಗೆ ಹಂಚಿ ತುಮಕೂರು ಕ್ಷೇತ್ರಕ್ಕೆ ಬರುತ್ತಿರುವ ಜೆಡಿಎಸ್ ವರಿಷ್ಠ ಹೆಚ್‌ಡಿ ದೇವೇಗೌಡರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದಿರುವ ರವಿ ಕುಮಾರ್, ಜನ ಕಾಂಗ್ರೆಸ್ ಅಭ್ಯರ್ಥಿ ಬೇಕೆಂದು ಪಟ್ಟು ಹಿಡಿದಿದ್ದಾರೆ ಎಂದು ತಿಳಿಸಿದರು.