ತುಮಕೂರು : ತುಮಕೂರು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯಾಗಿ ಎಚ್.ಡಿ ದೇವೇಗೌಡರು ಕಣಕ್ಕಿಳಿದಿದ್ದು, ಅವರ ಎದುರಾಳಿಯಾಗಿ ಬಂಡಾಯವಾಗಿ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಮುಖಂಡ ಕೆ.ಎನ್ ರಾಜಣ್ಣ ನಾಮಪತ್ರ ವಾಪಸ್ ಪಡೆದಿದ್ದಾರೆ. 

ತುಮಕೂರು ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಂಡಾವಾಗಿ ಇಬ್ಬರು ಕಾಂಗ್ರೆಸ್ ಮುಖಂಡರಾದ ಕೆ.ಎನ್. ರಾಜಣ್ಣ ಹಾಗೂ ಮುದ್ದ ಹನುಮೇಗೌಡ ನಾಮಪತ್ರ ಸಲ್ಲಿಸಿದ್ದರು. 

ಇನ್ನು ನಾಮಪತ್ರ ವಾಪಸ್ ಪಡೆದ ಬಳಿಕ ಮಾತನಾಡಿದ ಕೆ.ಎನ್.ರಾಜಣ್ಣ  ಮುದ್ದ ಹನುಮೇಗೌಡರು ನಾಮಪತ್ರ ವಾಪಸ್ ಪಡೆದಿದ್ದಾರೆ. ನಾಮಪತ್ರ ವಾಪಸ್ ಪಡೆದಿದ್ದಕ್ಕೆ ನನಗೆ ಯಾವುದೇ ವೈಯಕ್ತಿಕ ಬೇಡಿಕೆಗಳಿಲ್ಲ ಎಂದಿದ್ದಾರೆ. 

ಇನ್ನು ಮುದ್ದಹನುಮೇಗೌಡರ ಪರ ನಾಮಪತ್ರ ವಾಪಸ್ ಪಡೆದ ರಾಯಸಂದ್ರ ರವಿಕುಮಾರ್ ಮಾತನಾಡಿ ಹೈಕಮಾಂಡ್ ನಿರ್ದೇಶನದಂತೆ ಕಣದಿಂದ ಹಿಂದೆ ಸರಿಯಲಾಗಿದೆ. ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಉಂಟಾಗಿ ಮೈತ್ರಿ ಸರ್ಕಾರಕ್ಕೆ ಸಮಸ್ಯೆ ಎದುರಾಗಲಿದೆ ಎನ್ನುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದರು.