ಹಾಸನ : ಲೋಕಸಭಾ ಮಹಾ ಸಮರದ ಎಣಿಕೆ ಕಾರ್ಯ ಭರದಿಂದ ಸಾಗಿದೆ. ಇತ್ತ ಅಭ್ಯರ್ಥಿಗಳ ಎದೆಯಲ್ಲಿ ಢವ ಢವ ಆರಂಭವಾಗಿದೆ. 

ಇತ್ತ ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಪ್ರಜ್ವಲ್ ರೇವಣ್ಣ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ. 

ದೇವೇಗೌಡರು ತಮ್ಮ ಮೊಮ್ಮಗನಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದು, ಪ್ರಜ್ವಲ್ ಹಾಸನದಿಂದ ಸ್ಪರ್ಧೆ ಮಾಡಿದ್ದರು. ಪ್ರಜ್ವಲ್ ಎದುರಾಳಿಯಾಗಿ ಕೈ ತೊರೆದು ಬಿಜೆಪಿ ಸೇರಿದ ಎ. ಮಂಜು ನಿಂತಿದ್ದು,  ಹಿನ್ನಡೆ ಅನುಭವಿಸಿದ್ದಾರೆ. 

ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಎ. ಮಂಜು ವಿರುದ್ಧ 21 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.