ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ರಾಜ್ಯಕ್ಕೆ ಬರಬಹುದು ಎಂಬ ಅನುಮಾನದ ಹಿನ್ನೆಲೆಯಲ್ಲಿ ಬಿಜೆಪಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯನ್ನು ಮೊದಲ ಹಂತದ ಪಟ್ಟಿಯಲ್ಲಿ ಘೋಷಿಸದೆ ಉಳಿಸಿಕೊಂಡಿದೆ. 

ಒಂದು ವೇಳೆ  ರಾಹುಲ್ ಗಾಂಧಿ ಅವರು ಈ ಕ್ಷೇತ್ರದಿಂದ ಅಭ್ಯರ್ಥಿಯಾದಲ್ಲಿ ಆಗ ಬಿಜೆಪಿಯಿಂದ ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ ಎಂದು ತಿಳಿದು ಬಂದಿದೆ. 

ಈವರೆಗೆ ರಾಹುಲ್ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸುತ್ತಾರಾ, ಸ್ಪರ್ಧಿಸಿದರೆ ಯಾವ ಕ್ಷೇತ್ರದಿಂದ ಎಂಬುದು ಅಸ್ಪಷ್ಟವಾಗಿದೆ. ಸದ್ಯದ ಮಟ್ಟಿಗೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ಪುತ್ರಿ ನಿಶಾ ಅವರನ್ನು ಅಭ್ಯರ್ಥಿಯನ್ನಾಗಿಸಲು ಬಿಜೆಪಿ ನಾಯಕರು ನಿರ್ಧರಿಸಿದ್ದಾರೆ. 

ಆದರೆ, ರಾಹುಲ್ ಗಾಂಧಿ ಈ ಕ್ಷೇತ್ರದಿಂದ ಕಣಕ್ಕಿಳಿದಲ್ಲಿ ಆಗ ಅಶೋಕ್ ಅವರು ಬಿಜೆಪಿ ಅಭ್ಯರ್ಥಿಯಾಗಬಹುದು ಎನ್ನಲಾಗಿದೆ.