Asianet Suvarna News Asianet Suvarna News

ಕಾಂಗ್ರೆಸ್ ನೇತೃತ್ವದ ಒಕ್ಕೂಟ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ: ಕೆಎಚ್‌ ಮುನಿಯಪ್ಪ

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 28 ಕ್ಷೇತ್ರದಲ್ಲಿಯೂ ವಿಶ್ವಾಸವಿದೆ. ರಾಜ್ಯದಲ್ಲಿ ಜಾರಿಯಾಗಿರುವ ಗ್ಯಾರಂಟಿ ಯೋಜನೆಗಳು ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಆಹಾರ ಸಚಿವ ಕೆಎಚ್‌ ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದರು.

Lok sabha election 2024 in Karnataka Minister KH Muniyappa stats after voting at Kolar constituency rav
Author
First Published Apr 26, 2024, 6:41 PM IST | Last Updated Apr 26, 2024, 6:41 PM IST

ಕೋಲಾರ (ಏ.26): ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 28 ಕ್ಷೇತ್ರದಲ್ಲಿಯೂ ವಿಶ್ವಾಸವಿದೆ. ರಾಜ್ಯದಲ್ಲಿ ಜಾರಿಯಾಗಿರುವ ಗ್ಯಾರಂಟಿ ಯೋಜನೆಗಳು ಪಕ್ಷದ ಗೆಲುವಿಗೆ ಸಹಕಾರಿಯಾಗಲಿದೆ ಎಂದು ಆಹಾರ ಸಚಿವ ಕೆಎಚ್‌ ಮುನಿಯಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಕೋಲಾರದಲ್ಲಿ ಪತ್ನಿ ಜೊತೆಗೆ ಮತದಾನ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಒಕ್ಕೂಟ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ. ಕಾಂಗ್ರೆಸ್‌ ಕೊಟ್ಟಿರುವ ಪ್ರಣಾಳಿಕೆಯಿಂದ ಈ ಬಾರಿ ದೇಶಾದ್ಯಂತ ಕಾಂಗ್ರೆಸ್ ಪರ ಒಲುವು ತೋರಿದ್ದಾರೆ. ಈ ಹಿನ್ನೆಲೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್‌ಗೆ ವಿರೋಧ ಪಕ್ಷವಾಗುವ ಅರ್ಹತೆಯೂ ಇಲ್ಲ: ವಿಶ್ವೇಶ್ವರ ಹೆಗ್ಡೆ ಕಾಗೇರಿ ವಾಗ್ದಾಳಿ

ಇನ್ನು ಕೋಲಾರ ಕ್ಷೇತ್ರದ ಅಭ್ಯರ್ಥಿ ಗೆಲ್ಲಲಿದ್ದಾರೆ. ಕೋಲಾರ ಕ್ಷೇತ್ರದಲ್ಲಿ ಅಭ್ಯರ್ಥಿ ಕರೆದಾಗಲೆಲ್ಲ ಬಂದ ಪ್ರಚಾರ ಮಾಡಿದ್ದೇನೆ. ಕ್ಷೇತ್ರದ ಜನತೆಯಿಂದ ನನ್ನನ್ನು ದೂರ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ಚಿಕ್ಕಬಳ್ಳಾಪುರ, ಕೋಲಾರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸುವುದು ಖಚಿತ ಎಂದರು.

ಕರ್ನಾಟಕ Election 2024 Live: 14 ಲೋಕಸಭಾ ಕ್ಷೇತ್ರಗಳ.ಕ್ಷಣ ಕ್ಷಣದ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Latest Videos
Follow Us:
Download App:
  • android
  • ios