ಬೆಳಗಾವಿ :  ಲೋಕಸಭಾ ಚುನಾವಣೆ ಕಣ ರಂಗೇರುತ್ತಿದೆ. 2ನೇ ಹಂತದ ಚುನಾವಣೆಗೆ  ಒಂದು ದಿನವಷ್ಟೇ ಬಾಕಿ ಉಳಿದಿದ್ದು, ವಿವಿಧ ರೀತಿಯ ರಾಜಕೀಯ ಬೆಳವಣಿಗೆಗಳು ಆಗುತ್ತಿವೆ. 

ಹಲವು ದಿನಗಳ ರಾಜಕೀಯ ಚರ್ಚೆಗೆ ಕಾರಣವಾಗಿದ್ದ ಬೆಳಗಾವಿಯಲ್ಲಿ ಇದೀಗ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗರು ಕಾಂಗ್ರೆಸ್ ಗೆ ಜೈ ಎಂದಿದ್ದಾರೆ. 

150ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ಏಕಾ ಏಕಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಬೆಳಗಾವಿಯ ಕಾಂಗ್ರೆಸ್ ನಾಯಕ ಸಚಿವ ಸತೀಶ ಜಾರಕಿಹೊಳಿ ನೆತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರಿದ್ದಾರೆ. 

ಬೆಳಗಾವಿಯ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಬಿಜೆಪಿಯಿಂದ ಕಾಂಗ್ರೆಸ್ ನತ್ತ ಮುಖ ಮಾಡಿದರು.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂಧು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28