ವಿಜಯಪುರ: ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಮಾಜಿ ಸಚಿವ, ಶಾಸಕ ಗೋವಿಂದ ಕಾರಜೋಳ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

ನಗ​ರ​ದಲ್ಲಿ ಗುರುವಾರ ಬಿಜೆಪಿ ಕಾರ್ಯಕರ್ತರ ಅವಲೋಕನ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ವಿಜಯಪುರ ಲೋಕಸಭೆ ಮೀಸಲು ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಹಣದ ಹೊಳೆ ಹರಿಸಿದ್ದರೂ ಬಿಜೆಪಿಯ ಗೆಲುವು ನಿಶ್ಚಿತ. 

ಬೇಕಿದ್ದರೆ ಯಾರಾದರೂ ಒಂದು ರು. ಬೆಟ್‌ ಕಟ್ಟಿ. ನಾನು ಬೆಟ್ಟಿಂಗ್‌ಗೆ ರೆಡಿ ಎಂದು ಹೇಳಿದರು. ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಕಾಂಗ್ರೆಸ್‌ ಒಡೆದು ಮೂರು ಹೋಳಾಗುತ್ತದೆ ಎಂದು ಭವಿಷ್ಯ ನುಡಿದರು.

ಮೋದಿ, ರಾಹುಲ್‌ಗಿಂತ ದೇವೇಗೌಡರಿಗೆ ಪ್ರಧಾನಿ ಹುದ್ದೆ ಅವಕಾಶ ಹೆಚ್ಚು!