Asianet Suvarna News Asianet Suvarna News

ಮಂಡ್ಯದಲ್ಲಿ ಸುಮಲತಾ ಬೆನ್ನಿಗೆ ನಿಂತ ಬಿಜೆಪಿ-ಕಾಂಗ್ರೆಸ್

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ಅಭ್ಯರ್ಥಿಗಳ ಭರ್ಜರಿ ಪ್ರಚಾರ ಮುಂದುವರಿದಿದೆ. ಮಂಡ್ಯದಲ್ಲಿ ರೋಡ್ ಶೋ ನಡೆಸುತ್ತಿರುವ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರಿಶ್ ಗೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ತಮ್ಮ ಬಾವುಟ ಪ್ರದರ್ಶಿಸಿ ಬೆಂಬಲ ನೀಡುತ್ತಿದ್ದಾರೆ. 

Lok Sabha Elections 2019 Congress BJP Workers Supports Sumalatha Ambareesh In Mandya
Author
Bengaluru, First Published Mar 30, 2019, 11:37 AM IST

ಮಂಡ್ಯ  :  ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳಿಂದ ಭರ್ಜರಿ ಪ್ರಚಾರ ನಡೆಯುತ್ತಿದೆ. 

ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಸುಮಲತಾ ಅಂಬರೀಶ್ ಇದೀಗ ಜಿಲ್ಲೆಯಾದ್ಯಂತ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ.  

ಪಕ್ಷೇತರ ಅಭ್ಯರ್ಥಿಯಾದ ಸುಮಲತಾಗೆ ಮಂಡ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ಪಕ್ಷಗಳಿಂದಲೂ ಬೆಂಬಲ ದೊರೆಯುತ್ತಿದ್ದು, ಪ್ರಚಾರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಬಾವುಟಗಳು ರಾರಾಜಿಸುತ್ತಿವೆ.  ಮಂಡ್ಯದ ಕಿಲಾರ ಗ್ರಾಮದಲ್ಲಿ ರೋಡ್ ಶೊ ನಡೆಸುತ್ತಿದ್ದು ಎರಡೂ ಪಕ್ಷದ ಬಾವುಟಗಳನ್ನೂ ಹಿಡಿದು ಕಾರ್ಯಕರ್ತರು ಪಾಲ್ಗೊಂಡಿದ್ದಾರೆ.  

ರಾಷ್ಟ್ರ ರಾಜಕಾರಣದಲ್ಲಿ ಬಿಜೆಪಿ - ಕಾಂಗ್ರೆಸ್ ಬಿರುಸಿನ ಪೈಪೋಟಿ ನಡೆಯುತ್ತಿದ್ದರೆ ಮಂಡ್ಯದಲ್ಲಿ ಮಾತ್ರ ಎರಡೂ ಪಕ್ಷಗಳ ಕಾರ್ಯಕರ್ತರು ಒಂದಾಗಿ ಸಾಥ್ ನೀಡುತ್ತಿದ್ದಾರೆ. ಇದರೊಂದಿಗೆ ರೈತ ಸಂಘವೂ ಕೂಡ ಸುಮಲತಾ ಬೆನ್ನಿಗೆ ನಿಂತು ಬೆಂಬಲ ನೀಡುತ್ತಿದೆ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ

Follow Us:
Download App:
  • android
  • ios