ನೆಲಮಂಗಲ: ದೇಶದಲ್ಲಿ ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರವಿರಿಸಿ ಜನಸಾಮಾನ್ಯರಿಗೆ ನ್ಯಾಯ ದೊರಕಿಸಿಕೊಡುವ ಸಲುವಾಗಿ ಮೈತ್ರಿ ಮಾಡಿ ಕೊಂಡು ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗಿದೆ. 

ರಾಜ್ಯದ ಎಲ್ಲಾ ಮೈತ್ರಿ ಅಭ್ಯರ್ಥಿಗಳನ್ನು ಚುನಾಯಿಸುವಂತೆ ಸಚಿವ ಡಿ.ಕೆ. ಶಿವಕುಮಾರ್ ತಿಳಿಸಿದರು. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಡಾ.ಎಂ. ವೀರಪ್ಪ ಮೊಯ್ಲಿ ಪರ ಮತ ಯಾಚನೆ ಮಾಡಿದರು. 

ಬುಧವಾರ ಸಂಜೆ ನೆಲಮಂಗಲ ಪಟ್ಟಣದ ಬಿ.ಎಚ್. ರಸ್ತೆಯ ಟೌನ್ ಪೊಲೀಸ್ ಠಾಣೆಯ ಸನಿಹದ ಅಂಬೇಡ್ಕರ್ ವೃತ್ತದಿಂದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದವರೆಗೂ ರೋಡ್‌ಶೋ ನಡೆಸಿದ ಡಿಕೆಶಿ, ಕೋಮುವಾದಿ ಬಿಜೆಪಿಯನ್ನು ಅಧಿಕಾರ ದಿಂದ ದೂರವಿಡಲು ಮೈತ್ರಿ ಅಗತ್ಯವಿತ್ತು ಎಂದರು.

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.