ಬೆಂಗಳೂರು : ಲೋಕಸಭೆ ಚುನಾವಣಾ ಕಣದಲ್ಲಿ ಮೈತ್ರಿಯೊಂದಿಗೆ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಸಚಿವ ಕೃಷ್ಣ ಬೈರೇಗೌಡ ಅವರನ್ನು ಗೆಲ್ಲಿಸಲು ಜವಾಬ್ದಾರಿ ಜೆಡಿಎಸ್‌ಗೂ ಇದ್ದು, ಯಾವುದೇ ಮನಸ್ತಾಪ ಇಲ್ಲದೆ ಚಾಚೂ ತಪ್ಪದೆ ಪಕ್ಷದ ನಾಯಕರು, ಕಾರ್ಯಕರ್ತರು ಕೆಲಸ ಮಾಡಲಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಆಶ್ವಾಸನೆ ನೀಡಿದ್ದಾರೆ.

ಜೆಡಿಎಸ್ ಕಚೇರಿಗೆ ಬುಧವಾರ ಸಂಜೆ  ಆಗಮಿಸಿದ ಕೃಷ್ಣ ಬೈರೇಗೌಡ ಸೇರಿದಂತೆ ಕಾಂಗ್ರೆಸ್ ನಾಯಕರೊಂದಿಗೆ ಜೆಡಿಎಸ್ ಮುಖಂಡರು ಸಭೆ ನಡೆಸಿದರು. ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಒಕ್ಕೊರಲವಾಗಿ ಕೆಲಸ ಮಾಡುವ ಕುರಿತು ನಿರ್ಧಾರ ಕೈಗೊಳ್ಳಲಾಯಿತು. 

ಬಳಿಕ ಸುದ್ದಿಗಾರರ ಮಾತನಾಡಿ ಜತೆ  ಕಾಂಗ್ರೆಸ್ ಅಭ್ಯರ್ಥಿಕೃಷ್ಣ ಬೈರೇಗೌಡ ಅವರನ್ನು ಗೆಲ್ಲಿಸುವುದು ನಮ್ಮ ಜವಾಬ್ದಾರಿ. ಕಾಂಗ್ರೆಸ್-ಜೆಡಿಎಸ್ ಮುಖಂಡರು ಜಂಟಿಯಾಗಿ ಪ್ರಚಾರ ಕೈಗೊಳ್ಳಲಾಗುವುದು. ಜೆಡಿಎಸ್ ನಾಯಕರು, ಪಾಲಿಕೆ ಸದಸ್ಯರು, ಕಾರ್ಯಕರ್ತರು ಯಾವುದೇ ಭಿನ್ನತೆ ಇಲ್ಲದೆ ಕೆಲಸ ಮಾಡಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಭರವಸೆ ನೀಡಿದರು.