ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ದೋಸ್ತಿ ಪಕ್ಷಗಳಿಗೆ ಮತ್ತೊಂದು ಪಕ್ಷ ಬೆಂಬಲ ದೊರೆತಿದೆ. 

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕ ಜನತಾ ರಂಗ ಪಕ್ಷವೂ ಕಾಂಗ್ರೆಸ್‌ ಮತ್ತು ಜೆಡಿಎಸ್‌ ದೋಸ್ತಿ ಪಕ್ಷಗಳಿಗೆ ಬೆಂಬಲ ಸೂಚಿಸಲಿದೆ ಎಂದು ಆ ಪಕ್ಷದ ಅಧ್ಯಕ್ಷ ಸಿ.ಕೆ. ರವಿಚಂದ್ರ ತಿಳಿಸಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಮತ್ತು ಮಿತ್ರ ಪಕ್ಷಗಳು ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳಿಸುವುದರಲ್ಲಿ ಸಂಶಯವಿಲ್ಲ. ಬೆಂಗಳೂರು ಕೇಂದ್ರ ಮತ್ತು ಉತ್ತರ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಗಳಾದ ಪ್ರಕಾಶ್‌ ರಾಜ್‌ ಹಾಗೂ ಹರಿಪ್ರಸಾದ್‌ ಅವರಿಗೆ ಬೆಂಬಲ ನೀಡಲಾಗುವುದು. ಉಳಿದಂತೆ ಇನ್ನುಳಿದ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷದ ಅಭ್ಯರ್ಥಿಗಳಿಗೆ ಸಂಪೂರ್ಣ ಬೆಂಬಲ ನೀಡಲಾಗುವುದು ಎಂದು ತಿಳಿಸಿದರು.

ಸ್ವಾಮಿನಾಥನ್‌ ವರದಿಯನ್ನು ಜಾರಿಗೆ ತರಬೇಕು, ಆಹಾರ ಪದಾರ್ಥಗಳ ಮೇಲೆ ಹಾಕಿರುವ ಜಿಎಸ್‌ಟಿಯನ್ನು ಸಂಪೂರ್ಣ ರದ್ದುಪಡಿಸಬೇಕು, ವೃತ್ತಿಪರ ಕೋರ್ಸ್‌ನ ವಿದ್ಯಾರ್ಥಿಗಳಿಗೆ ಉದ್ಯೋಗ ಸೃಷ್ಠಿಸಬೇಕು, ನಗರ ಪ್ರದೇಶಗಳಲ್ಲಿ ಹೆಚ್ಚು ಶೌಚಾಲಯಗಳು ನಿರ್ಮಾಣ ಮಾಡಬೇಕು, ದೇಶದ ಅಭಿವೃದ್ಧಿಗೆ ಸಂಬಂಧಿಸಿದಂತೆ ವಿವಿಧ ಯೋಜನೆಗಳನ್ನು ಜಾರಿಗೆ ತರಬೇಕೆಂದು ದೋಸ್ತಿ ಪಕ್ಷಗಳಿಗೆ ಒತ್ತಾಯಿಸಿದರು.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ