ಮಂಡ್ಯ : ಮಾಜಿ ಪ್ರಧಾನಿ ಎಚ್ .ಡಿ. ದೇವೇಗೌಡರದ್ದು ಮಾತ್ರ ಕುಟುಂಬ ರಾಜಕಾರಣಾನಾ? ನಟ ಅಂಬರೀಷ್ ಪತ್ನಿ ಸುಮಲತಾ ಮಾಡ್ತಿರೋದು ಕುಟುಂಬ ರಾಜಕಾರಣ ಅಲ್ವಾ ಎಂದು ವಿಧಾನಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಕಿಡಿಕಾರಿದ್ದಾರೆ.

ತಾಲೂಕಿನ ಆಬಲವಾಡಿ ಗ್ರಾಮದ ತೋಪಿನ ತಿಮ್ಮಪ್ಪ ದೇವಾಲಯದ ಆವರಣದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿ ಸುಮಲತಾ ಬೆಂಬಲಿಗರ ವಿರುದ್ಧ ಕಿಡಿಕಾರಿದರು. ದೇವೇಗೌಡರದ್ದು ಕುಟುಂಬ ರಾಜಕಾರಣ ಅಂತ ಟೀಕಿಸುತ್ತಾರೆ.

ಹಾಗಾದರೆ ಸುಮಲತಾ ಮಾಡ್ತಿರೋದು ಏನು? ಅವರ ಪತಿ ಸಂಸದರು, ಸಚಿವರಾಗಿರಲಿಲ್ಲವೇ? ಸುಮಲತಾ ಮಾಡೋದು ಕುಟುಂಬ ರಾಜಕಾರಣ ಅಲ್ಲವೇ? ಇಲ್ಲಿ ಯಾರ ಆಟವೂ ನಡೆಯೋದಿಲ್ಲ ಎಂದರು. ಜಿಲ್ಲೆಯ ಅಭಿವೃದ್ಧಿಯ ದೂರದೃಷ್ಟಿಯಿಂದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ 5000 ಕೋಟಿ ನೀಡಿದ್ದಾರೆ. 

ಯಾವುದೇ ಚುನಾವಣೆಯಲ್ಲೂ ನಾವು ಸೋತಿಲ್ಲ. ಅದೇ ರೀತಿ ಈ ಚುನಾವಣೆಯಲ್ಲೂ ಪಕ್ಷದ ಅಭ್ಯರ್ಥಿ ನಿಖಿಲ್ ಗೆಲುವು ನಿಶ್ಚಿತ ಎಂದರು.