ಹಾಸನ : ರಾಜ್ಯದಲ್ಲಿ ಜೆಡಿಎಸ್ ನೇತೃತ್ವದ ಸರ್ಕಾರ ಸುಭದ್ರವಾಗಿರಲಿದೆ. ಅಂತೆಯೇ ಕೇಂದ್ರ ಯುಪಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಎಚ್.ಡಿ ರೇವಣ್ಣ ಹೇಳಿದ್ದಾರೆ. 

ಶ್ರವಣಬೆಳಗೊಳದಲ್ಲಿ ಮಾತನಾಡಿದ ರೇವಣ್ಣ ಶ್ರೀಗಳ ಆಶಿರ್ವಾದ ಇರುವವರೆಗೂ ಏನು ಆಗದು. ಮೈತ್ರಿ ಸರ್ಕಾರ ಸುಭದ್ರವಾಗಿ ಮುಂದುವರಿಯಲಿದೆ ಎಂದರು. 

ಇನ್ನು ಲೋಕಸಭಾ ಚುನಾವಣೆ ಫಲಿತಾಂಶ ಮೇ 23 ರಂದು ಫಲಿತಾಂಶ ಪ್ರಕಟವಾಗಲಿದ್ದು, ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗೆ ಗೆಲುವು ನಿಶ್ಚಿತ ಎಂದು ಸಚಿವ ಎಚ್.ಡಿ.ರೇವಣ್ಣ ಭರವಸೆ ವ್ಯಕ್ತಪಡಿಸಿದರು. 

ಸಂಸದರಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ಮುಖಂಡ  ಎಚ್.ಡಿ ದೇವೇಗೌಡ, ಪ್ರಜ್ವಲ್ ರೇವಣ್ಣ, ನಿಖಿಲ್ ಕುಮಾರಸ್ವಾಮಿ  ಡೆಲ್ಲಿಗೆ ತೆರಳುವದು ಖಚಿತ ಎಂದು ಭವಿಷ್ಯ ನುಡಿದರು. 

ಇನ್ನು  ಮಂಡ್ಯದಲ್ಲಿ ಸುಮಲತಾ ಜೊತೆಗೆ ರೆಬೆಲ್ ನಾಯಕರು ಡಿನ್ನರ್ ಪಾರ್ಟಿ ನಡೆಸಿದ ಬಗ್ಗೆ ತಾವು ಯಾವುದೇ ರೀತಿ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.