ಬೆಂಗಳೂರು :  ಈ ಹಿಂದೆ ಕರ್ನಾಟಕದಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಸ್ಪರ್ಧಿಸಿದ್ದರು. ಇದೀಗ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸುವ ಮೂಲಕ ರಾಜ್ಯದಲ್ಲಿ ಮತ್ತಷ್ಟುಶಕ್ತಿ ತುಂಬುವ ಕೆಲಸ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 

ಈ ಹಿಂದೆ ಕರ್ನಾಟಕದಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಮತ್ತು ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಸ್ಪರ್ಧಿಸಿದ್ದರು. ಇದೀಗ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಕರ್ನಾಟಕದಿಂದ ಸ್ಪರ್ಧಿಸುವ ಮೂಲಕ ರಾಜ್ಯದಲ್ಲಿ ಮತ್ತಷ್ಟುಶಕ್ತಿ ತುಂಬುವ ಕೆಲಸ ಮಾಡಲಿ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡುರಾವ್‌ ಅಭಿಪ್ರಾಯಪಟ್ಟಿದ್ದಾರೆ. 

ಕಾಂಗ್ರೆಸ್‌ ಪರಿವರ್ತನಾ ಯಾತ್ರೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ರಾಜ್ಯದಲ್ಲಿ 5 ವರ್ಷಗಳ ಕಾಲ ಸಿದ್ದಾರಾಮಯ್ಯ ನೇತೃತ್ವದಲ್ಲಿ ಹಗರಣ ರಹಿತ ಆಡಳಿತ ನೀಡಿದ್ದು, ರಾಜ್ಯದಲ್ಲಿ ಈ ಬಾರಿಯ ಚುನಾವಣೆಯಲ್ಲಿ 20ರಿಂದ 22 ಸ್ಧಾನ ಗೆಲುವು ಸಾಧಿಸಲಿದ್ದೇವೆ. ಈ ಮೂಲಕ ದೇಶದಲ್ಲಿ ಹೊಸ ಸರ್ಕಾರ ರಚನೆಯಾಗಿ ರಾಹುಲ್‌ ಗಾಂಧಿ ಪ್ರಧಾನಿಯಾಗಲಿದ್ದಾರೆ ಎಂದರು.