ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡಿದ್ದಾರೆ. ಸುಮಲತಾಗೆ ಬೆಂಬಲ ನೀಡಿದ ಕಾಂಗ್ರೆಸ್ ಮುಖಂಡರೋರ್ವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. 

ಮಂಡ್ಯ : ಲೋಕಸಭಾ ಚುನಾವಣೆಗೆ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಸುಮಲತಾಗೆ ಬೆಂಬಲ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ಸಿಗರೋರ್ವರನ್ನು ಉಚ್ಚಾಟನೆ ಮಾಡಲಾಗಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮಂಡ್ಯ ಕ್ಷೇತ್ರದಲ್ಲಿ ‘ದೋಸ್ತಿ ಅಭ್ಯರ್ಥಿ’ ನಿಖಿಲ್ ಕುಮಾರಸ್ವಾಮಿ ವಿರುದ್ಧ ಕೆಲಸ ಮಾಡುವ ಕಾಂಗ್ರೆಸ್ ಮುಖಂಡರ ವಿರುದ್ಧ ರಾಜ್ಯ ಕಾಂಗ್ರೆಸ್ ಕ್ರಮ ಕೈಗೊಂಡಿದೆ. 

ಮೈತ್ರಿ ವಿರುದ್ಧ ಕೆಲಸ ಮಾಡುತ್ತಿರುವ ಕೆಪಿಸಿಸಿ ಸದಸ್ಯ ಇಂಡುವಾಳು ಸಚ್ಚಿದಾನಂದ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ಮುಖಂಡ ಹನಕೆರೆ ಶಶಿಕುಮಾರ್ ಅವರನ್ನು ಜಿಲ್ಲಾ ವಕ್ತಾರ ಹುದ್ದೆಯಿಂದ ತೆರವುಗೊಳಿಸಲಾಗಿದೆ. 

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯಲ್ಲಿ ಮತ ಚಲಾಯಿಸಲು 90 ಕೋಟಿ ಮಂದಿ ಅರ್ಹರಾಗಿದ್ದಾರೆ