ಲೋಕಸಭಾ ಚುನಾವಣೆ ಹೊತ್ತಲ್ಲಿ ಹಾಸನದಲ್ಲಿ ಪೆನ್‌ಡ್ರೈವ್ ಸದ್ದು! ಅಭ್ಯರ್ಥಿ ಬೆಂಬಲಿಗರಿಂದ ಸೈಬರ್‌ ಕ್ರೈಂಗೆ ದೂರು

ಹಾಸನ ಲೋಕಸಭಾ ಕ್ಷೇತ್ರದ ರಾಜಕೀಯ ಪಕ್ಷವೊಂದರ ಅಭ್ಯರ್ಥಿಯೊಬ್ಬರಿಗೆ ಸೇರಿದೆ ಎನ್ನಲಾದ ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಸುದ್ದಿ ಕ್ಷೇತ್ರದಾದ್ಯಂತ ಚುನಾವಣೆಯಲ್ಲಿ ಭಾರಿ ಸಂಚಲನ ಉಂಟು ಮಾಡಿದೆ.

Lok sabha polls Hasan pen drive case Prajwal Revanna complained to cybercrime rav

ಬೆಂಗಳೂರು(ಏ.25): ಹಾಸನ ಲೋಕಸಭಾ ಕ್ಷೇತ್ರದ ರಾಜಕೀಯ ಪಕ್ಷವೊಂದರ ಅಭ್ಯರ್ಥಿಯೊಬ್ಬರಿಗೆ ಸೇರಿದೆ ಎನ್ನಲಾದ ರಾಸಲೀಲೆಯ ಫೋಟೋ ಮತ್ತು ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಸುದ್ದಿ ಕ್ಷೇತ್ರದಾದ್ಯಂತ ಚುನಾವಣೆಯಲ್ಲಿ ಭಾರಿ ಸಂಚಲನ ಉಂಟು ಮಾಡಿದೆ.

ಕಳೆದ ಮೂರು ದಿನಗಳಿಂದ ಏಕಾಏಕಿ ಈ ಪೆನ್ ಡ್ರೈವ್ ಬಗ್ಗೆ ಚರ್ಚೆ ಆರಂಭವಾಗಿದ್ದು, ಅಂತೆ ಕಂತೆಗಳು ಹರಿದಾಡುತ್ತಿವೆ. ಆದರೆ, ಈ ವಿಡಿಯೋಗಳನ್ನು ಅತ್ಯಾಧುನಿಕ ಡೀಪ್ ಫೇಕ್ ತಂತ್ರಜ್ಞಾನ ಬಳಸಿ ಮಾಡಲಾಗಿದೆ ಎಂದು ಪ್ರತಿಪಾದಿಸಿರುವ ಅಭ್ಯರ್ಥಿಯ ಬೆಂಬಲಿಗರು ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರನ್ನೂ ದಾಖಲಿಸಿದ್ದಾರೆ.

ಚುನಾವಣೆಯ ಪ್ರಚಾರದ ಭರಾಟೆ ಆರಂಭವಾಗಿ ಇಷ್ಟು ದಿನಗಳ ಬಳಿಕ ಇದೀಗ ಕೊನೆಯ ಹಂತದಲ್ಲಿ ಈ ರಾಸಲೀಲೆಯ ವಿಡಿಯೋಗಳನ್ನು ಒಳಗೊಂಡ ಪೆನ್ ಡ್ರೈವ್ ಬಗ್ಗೆ ಚರ್ಚೆ ನಡೆಯುತ್ತಿರುವುದು ಕುತೂಹಲ ಮೂಡಿದ್ದು, ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಈ ಬಗ್ಗೆ ಹೆಚ್ಚು ಪ್ರತಿಕ್ರಿಯೆ ನೀಡದೆ ಶರಣಾಗಿದ್ದಾರೆ.

Devegowda: ಲೋಕಸಭಾ ಚುನಾವಣೆ ವೇಳೆ ಗೌಡರ ಕಣ್ಣೀರು ಅಸ್ತ್ರ! 'ನಾನು ಇನ್ನೇರಡು ವರ್ಷ ಬದುಕಬಹುದು ಅಷ್ಟೇ'

ಈ ಪೆನ್‌ಡ್ರೈನಲ್ಲಿ ಸುಮಾರು ಸಾವಿರಾರು ವಿಡಿಯೋಗಳಿವೆ ಎನ್ನಲಾಗುತ್ತಿದೆ. ಇದರಲ್ಲಿರುವ ಎನ್ನಲಾದ ಅಭ್ಯರ್ಥಿ ತನ್ನ ಬಳಿ ಸಹಾಯ ಕೇಳಿಕೊಂಡು ಬರುವ ಮಹಿಳೆಯರನ್ನು ತನ್ನ ಲೈಂಗಿಕ ತೃಷೆಗೆ ಬಳಸಿಕೊಳ್ಳುತ್ತಿದ್ದ. ಆ ಲೈಂಗಿಕ ಚಟುವಟಿಕೆಯನ್ನು ತಾನೇ ವಿಡಿಯೋ ಮಾಡಿಟ್ಟುಕೊಳ್ಳುತ್ತಿದ್ದ. ಈಗಾಗಲೇ ಕ್ಷೇತ್ರದ ಹಲವರು ಈ ವಿಡಿಯೋಗಳನ್ನು ನೋಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅದರ ತುಣುಕುಗಳು ಹರಿದಾಡುತ್ತಿವೆ. ಈ ವಿಡಿಯೋ ತುಣುಕುಗಳಲ್ಲಿ ಕೆಲವು ಸಂಘಟನೆಗಳಿಗೆ ಸೇರಿದ ಮಹಿಳೆಯರು, ಅಭ್ಯರ್ಥಿಯ ಪಕ್ಷದ ಮುಖಂಡರ ಪತ್ನಿಯರು ಇದ್ದಾರೆ. ಮನೆ ಕೆಲಸದ ಮಹಿಳೆಯರೂ ಇದ್ದಾರೆ ಎಂಬ ಚರ್ಚೆ ಬಿರುಸಿನಿಂದ ನಡೆದಿದೆ.

ಮೇಕೆದಾಟು ಯೋಜನೆಗೆ ತಮಿಳರ ಅಡ್ಡಿ ಬೇಡ: ಮೋದಿಗೆ ದೇವೇಗೌಡ ಮನವಿ

ಈ ಹಿಂದೆ ಹಾಸನದ ವಕೀಲ ದೇವರಾಜೇಗೌಡ ಎಂಬುವವರು ಅಭ್ಯರ್ಥಿಯ ಹಲವು ಅಶ್ಲೀಲ ವಿಡಿಯೋಗಳು ತಮ್ಮ ಬಳಿ ಇವೆ ಎಂದು ಹೇಳಿಕೆ ನೀಡಿದ್ದರು. ಆದರೆ, ಇದೀಗ ಈ ವಿಡಿಯೋಗಳನ್ನು ತಾವು ಬಹಿರಂಗಗೊಳಿಸಿಲ್ಲ ಎಂದು ಸ್ಪಷ್ಟನೆಯನ್ನೂ ನೀಡಿದ್ದಾರೆ.

Latest Videos
Follow Us:
Download App:
  • android
  • ios