ಶಿವಮೊಗ್ಗ : ಲೋಕಸಭಾ ಚುನಾವಣೆ ಎಣಿಕೆ ಕಾರ್ಯ ಭರದಿಂದ ಸಾಗಿದೆ. ರಾಜ್ಯದಲ್ಲಿ ಅತ್ಯಂತ ಪ್ರತಿಷ್ಟೆಯ ಕಣಗಳಾದ ಮಂಡ್ಯ ಹಾಗೂ ಶಿವಮೊಗ್ಗದ ಫಲಿತಾಂಶದ ಕುತೂಹಲ ಗರಿಗೆದರಿದೆ. 

ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಸುಮಲತಾ ಅಂಬರಿಶ್ , ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಹಿನ್ನಡೆ ಅನುಭವಿಸಿದ್ದಾರೆ. 

ಸುಮಲತಾ ಅಂಬರೀಶ್ ವಿರುದ್ಧ ನಿಖಿಲ್ ಕೇವಲ 150 ಮತಗಳ ಅಂತರದಲ್ಲಿ ಹಿನ್ನಡೆ ಸಾಧಿಸಿದ್ದಾರೆ. 

ಇತ್ತ ಮಾಜಿ ಮುಖ್ಯಮಂತ್ರಿಗಳ ಪುತ್ರರಿಬ್ಬರು ಸ್ಪರ್ಧೆ ಮಾಡಿದ್ದ ಶಿವಮೊಗ್ಗ ಕ್ಷೇತ್ರದಲ್ಲಿ ಮತ್ತೊಮ್ಮೆ ರಾಘವೇಂದ್ರ ಗೆಲುವಿನತ್ತ ಹೆಜ್ಜೆ ಇಡುತ್ತಿದ್ದಾರೆ. ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ವಿರುದ್ಧ 70 ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.