ಕಲಬುರಗಿ : ಲೋಕಸಭಾ ಮಹಾ ಸಮರದ ಮತ ಎಣಿಕೆ ಬಿರುಸಿನಿಂದ ಸಾಗುತ್ತಿದೆ. ಕಲಬುರಗಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಭಾರಿ ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ. 

ಇನ್ನು ಉಮೇಶ್ ಜಾಧವ್ ರಾಜೀನಾಮೆಯಿಂದ ತೆರವಾದ ಚಿಂಚೋಳಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ ಉಮೇಶ್ ಜಾಧವ್ ಪುತ್ರ ಅವಿನಾಶ್ ಜಾಧವ್ ಕೂಡ ಮುನ್ನಡೆಯಲ್ಲಿದ್ದಾರೆ. 

ಕಾಂಗ್ರೆಸ್ ಗೆ ರಾಜೀನಾಮೆ ನೀಡಿ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆ ವಿರುದ್ಧ ಉಮೇಶ್ ಜಾಧವ್ ಸ್ಪರ್ಧೆ ಮಾಡಿದ್ದರು. ಇದೀಗ ಮೂರನೇ ಸುತ್ತಿನ ಮತ ಎಣಿಕೆಯಲ್ಲಿ ಉಮೇಶ್ ಜಾಧವ್ ಖರ್ಗೆ ಎದುರು 14 ಸಾವಿರ ಮತಗಳಷ್ಟು ಮುನ್ನಡೆ ಕಾಯ್ದುಕೊಂಡಿದ್ದಾರೆ. 

ಪುತ್ರ ಅವಿನಾಶ್ ಜಾಧವ್ ಕೂಡ ಕಾಂಗ್ರೆಸ್ ಅಭ್ಯರ್ಥಿ ಸುಭಾಶ್ ರಾಥೋಡ್ ವಿರುದ್ಧ ಮುನ್ನಡೆ ಕಾಯ್ದುಕೊಳ್ಳುವ ಮೂಲಕ ಅಪ್ಪ ಮಗನ ಜಾದು ಕ್ಷೇತ್ರದಲ್ಲಿ ನಡೆದಿದೆ.