ಮಂಡ್ಯ ಲೋಕಸಭಾ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ಬಿಜೆಪಿ ಮುಖಂಡರು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.  ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ದೂರಲಾಗಿದೆ. 

ಚಿಕ್ಕಮಗಳೂರು: ಮಂಡ್ಯ ಜೆಡಿಎಸ್ ಅಭ್ಯರ್ಥಿಯಾಗಿರುವ ನಿಖಿಲ್ ಕುಮಾರಸ್ವಾಮಿ ಈಗಾಗಲೇ ತಮ್ಮ ಪ್ರಚಾರ ಆರಂಭಿಸಿದ್ದಾರೆ. ಇದೀಗ ಅವರ ವಿರುದ್ಧ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ದೂರು ನೀಡಲಾಗಿದೆ. 

Add Asianetnews Kannada as a Preferred SourcegooglePreferred

ಶೃಂಗೇರಿಯ ಶಾರದಾಂಬೆ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಠದ ಆವರಣದೊಳಗೆ ಮಾಧ್ಯಮಗಳ ಜತೆ ಮಾತನಾಡುವ ಮೂಲಕ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ದೂರಲಾಗಿದೆ. 

ನಿಖಿಲ್ ವಿರುದ್ಧ ದೂರು ದಾಖಲಿಸುವಂತೆ ಬಿಜೆಪಿ ಜಿಲ್ಲಾ ಮುಖಂಡರು ಜಿಲ್ಲಾ ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದಾರೆ.