ತುಮಕೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ವಿವಿಧ ಪಕ್ಷಗಳಲ್ಲಿ ಗೆಲುವಿಗಾಗಿ ಮಾಸ್ಟರ್ ಪ್ಲಾನ್ ನಡೆಯುತ್ತಿದೆ.  

ತುಮಕೂರಿನಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ  ಜೆಡಿಎಸ್ ಹಿರಿಯ ನಾಯಕ ಎಚ್.ಡಿ ದೇವೇಗೌಡರನ್ನು ಸೋಲಿಸಲು ಇತ್ತ ಬಿಜೆಪಿ ನಾಯಕರು ರಣತಂತ್ರ ಹೆಣೆದಿದ್ದಾರೆ. 

ಅಹಿಂದ ಮತಗಳ ಸೆಳೆಯಲು ನಿರಂತರ ಪ್ರಯತ್ನ ಮಾಡುತ್ತಿದ್ದು, ಅಹಿಂದ ಸಮುದಾಯದ ಸ್ವಾಮೀಜಿಗಳನ್ನು ಬಿಜೆಪಿ ಅಭ್ಯರ್ಥಿ ಜಿ.ಎಸ್ ಬಸವರಾಜು ಹಾಗೂ ಮುಖಂಡರು ಭೇಟಿ ಮಾಡಿದ್ದಾರೆ. 

ಜಿಲ್ಲೆಯ ಎಲ್ಲಾ ಸಮುದಾಯದ ಸ್ವಾಮೀಜಿಗಳನ್ನು ಭೇಟಿ ಮಾಡಿ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡುತ್ತಿದ್ದು, ಜಿಲ್ಲೆಯಲ್ಲಿ ಪ್ರಭಾವ ಹೊಂದಿರುವ ಅಕ್ಕಪಕ್ಕ ಜಿಲ್ಲೆಯ ಮಠಗಳಿಗೂ ಭೇಟಿ ಮಾಡಿ ಸ್ವಾಮೀಜಿಗಳ ಜೊತೆಗೆ ಮಾತುಕತೆ ನಡೆಸುತ್ತಿದ್ದಾರೆ. 

ತುಮಕೂರು ಲೋಕ ಸಭೆಯಲ್ಲಿ ಅಹಿಂದ ಸಮುದಾಯದ ಮತಗಳು ನಿರ್ಣಾಯಕವಾಗಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಮುಖಂಡರು ಮಾಸ್ಟರ್ ಪ್ಲಾನ್ ಮಾಡುತ್ತಿದ್ದಾರೆ. ಹೊಸದುರ್ಗದ ಶ್ರೀ ಕಾಗಿನೆಲೆ ಮಹಾಸಂಸ್ಥನದ ಗುರುಪೀಠಕ್ಕೆ ಭೇಟಿ ನೀಡಿ,  ಶ್ರೀಗಳ ಬೆಂಬಲ‌ಕೊರಿದ್ದಾರೆ.  

ಸದ್ಯ ತುಮಕೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧೆಯಿಂದ ಕಾಂಗ್ರೆಸ್ ಮುಖಂಡರು ಬಂಡಾಯವೆದ್ದಿದ್ದು, ಈ ಬಂಡಾಯ ಶಮನಕ್ಕೆ ಯತ್ನ ನಡೆಯುತ್ತಿದೆ. ಈ ಗೊಂದಲವನ್ನು ಬಿಜೆಪಿ ಮುಖಂಡರು ಲಾಭವಾಗಿ ಉಪಯೋಗಿಸಿಕೊಳ್ಳುತ್ತಿದ್ದಾರೆ. 

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ