ಬೆಂಗಳೂರು[ಮಾ. 24] 1999ರಲ್ಲಿ ಅನಂತ್ ಕುಮಾರ್ ಅವರ ವಿರುದ್ಧ ಕಣಕ್ಕೆ ಇಳಿದಿದ್ದ ಬಿ.ಕೆ. ಹರಿಪ್ರಸಾದ್ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮತ್ತೆ ಕಣಕ್ಕೆ ಇಳಿಯಲಿದ್ದಾರೆ.

ಬೆಂಗಳೂರು ದಕ್ಷಿಣಕ್ಕೆ ಕಾಂಗ್ರೆಸ್ ಟಿಕಟ್ ಫೈನಲ್ ಮಾಡಿದೆ. ಇನ್ನೊಂದು ಕಡೆ ಬಿಜೆಪಿ ಇಲ್ಲಿಯವರೆಗೂ ಅಭ್ಯರ್ಥಿ ಘೋಷಣೆ ಮಾಡಿಲ್ಲ. ತೇಜಸ್ವಿನಿ ಅನಂತ್ ಕುಮಾರ್ ಅವರಿಗೆ ಟಿಕೆಟ್ ಸಿಗಲಿದೆ ಎಂದು ಹೇಳಲಾಗಿತ್ತು.

ಲೋಕಸಮರಕ್ಕೆ ಕರ್ನಾಟಕ ಕಾಂಗ್ರೆಸ್ ಅಭ್ಯರ್ಥಿಗಳ ಫಸ್ಟ್ ಲಿಸ್ಟ್ ರಿಲೀಸ್

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರು ದಕ್ಷಿಣದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ಶನಿವಾರ ರಾತ್ರಿ 18 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದ ಕಾಂಗ್ರೆಸ್ ಇದೀಗ 19ನೇ ಸ್ಥಾನಕ್ಕೂ ಅಭ್ಯರ್ಥಿ ಪಕ್ಕಾ ಮಾಡಿದೆ. ಹುಬ್ಬಳ್ಳಿ-ಧಾರವಾಡ ಕ್ಷೇತ್ರವನ್ನು ಬಾಕಿ ಉಳಿಸಿಕೊಂಡಿದೆ.