ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ವಿವಿಧ ಪಕ್ಷಗಳ ಹಣಾಹಣಿ ಜೋರಾಗಿದೆ. ಇದೀಗ ಇಬ್ಬರು ಸಿಎಂಗಳು ಎದುರಾಳಿಗಳಾಗುತ್ತಿದ್ದಾರೆ.
ಭೋಪಾಲ್: ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ವಿವಿಧ ಪಕ್ಷಗಳಿಂದ ಅಭ್ಯರ್ಥಿಗಳ ಆಯ್ಕೆ ಕುತೂಹಲವೂ ಕೂಡ ಗರಿಗೆದರಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದೀಗ ಮಧ್ಯ ಪ್ರದೇಶದಲ್ಲಿ ಅಚ್ಚರಿಯ ಬೆಳವಣಿಗೆಯಲ್ಲಿ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಎದುರಾಳಿಗಳಾಗಿ ಸ್ಪರ್ಧೆ ಮಾಡುತ್ತಿದ್ದಾರೆ.
ಮೂರು ಬಾರಿ ಮುಖ್ಯಮಂತ್ರಿಯಾಗಿ ಅತ್ಯಂತ ಬಲಿಷ್ಠ ನಾಯಕ ಎನಿಸಿಕೊಂಡು ಮಧ್ಯ ಪ್ರದೇಶದ ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ವಿರುದ್ಧ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಕಣಕ್ಕೆ ಇಳಿಸಲು ತೀರ್ಮಾನಿಸಲಾಗಿದೆ.
ಇಬ್ಬರೂ ಮುಖಂಡರೂ ಕೂಡ ಭೋಪಾಲ್ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಕಳೆದ 15 ವರ್ಚಗಳಿಂದ ಶಿವರಾಜ್ ಸಿಂಗ್ ಚೌಹಾಣ್ ವಿದಿಶಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದು, ಬಳಿಕ ಬುದ್ನಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಇದೀಗ ಭೋಪಾಲ್ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.
ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...
