ನವದೆಹಲಿ, (ಮೇ.23): 17ನೇ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಎನ್​ಡಿಎ ಮೈತ್ರಿಕೂಟ ಭರ್ಜರಿ ಮುನ್ನಡೆ ಸಾಧಿಸಿದ್ದು, ಈಗಾಗಲೇ ಕಾರ್ಯಕರ್ತರು ಎಲ್ಲೆಡೆ ವಿಜಯೋತ್ಸವ ಆಚರಿಸುತ್ತಿದ್ದಾರೆ. 

 ಸಂಜೆ ವೇಳೆಗೆ ಫಲಿತಾಂಶ ಏನು ಅನ್ನೋದು ಸ್ಪಷ್ಟವಾಗಿ ತಿಳಿಯಲಿದೆ. ಎನ್​​ಡಿಎ ಭಾರೀ ಅಂತರದಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು (ಗುರುವಾರ) ಸಂಜೆ ಸಂಸದೀಯ ಮಂಡಳಿ ಸಭೆ ನಡೆಯಲಿದೆ. 

ಸಭೆಯಲ್ಲಿ ಸರ್ಕಾರ ರಚನೆಯ ಬಗ್ಗೆ ಮಾತುಕತೆಗಳು ನಡೆಯುವ ಸಾಧ್ಯತೆಗಳಿವೆ. ಬಳಿಕ ಮೋದಿ ಅವರು ಕಾರ್ಯಕರ್ತರನ್ನು ಭೇಟಿ ಮಾಡಲಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.

ದೆಹಲಿಯ ಮುಖ್ಯ ಕಚೇರಿಯಲ್ಲಿ ಪಾರ್ಲಿಮೆಂಟರಿ ಬೋರ್ಡ್​ ಮೀಟಿಂಗ್ ನಡೆಯಲಿದ್ದು, ಅದಾದ ನಂತರ 5.30ರ ಸುಮಾರಿಗೆ ಬಿಜೆಪಿ ಕಚೇರಿಯಲ್ಲಿ ಮೋದಿ ಕಾರ್ಯಕರ್ಯರನ್ನು ಭೇಟಿ ಮಾಡಿ, ಭಾಷಣ ಮಾಡುವ ಸಾಧ್ಯತೆಗಳಿವೆ.