ಮಂಡ್ಯ : ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಮಂಡ್ಯದಲ್ಲಿ ಸುಮಲತಾ ಹಾಗೂ ನಿಖಿಲ್ ಕುಮಾರಸ್ವಾಮಿ ನಡುವೆ ಫೈಟ್ ನಡೆಯುತ್ತಿದೆ. 

ಮಂಡ್ಯದಲ್ಲಿ ಸದ್ಯ 144 ಸೆಕ್ಷನ್ ಜಾರಿಯಲ್ಲಿದ್ದು, ಯಾವುದೇ ರೀತಿಯ ಅಹಿತಕರ ಘಟನೆ ನಡೆದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಎಚ್.ಪಿ ಶಿವಪ್ರಕಾಶ್ ಎಚ್ಚರಿಕೆ ನೀಡಿದ್ದಾರೆ. 

ಯಾವುದೇ ರೀತಿಯ ಕಿಡಿಗೇಡಿ ಕೃತ್ಯ ಎಸಗಿದಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದು, ಮೆರವಣಿಗೆ ನಡೆಸುವಂತಿಲ್ಲ. ಪಟಾಕಿ ಸಿಡಿಸುವಂತಿಲ್ಲ ಎಂದಿದ್ದಾರೆ. 

ಜಿಲ್ಲಾಧಿಕಾರಿ ಸೂಚನೆ ಮೇರೆಗೆ  ಹೆಚ್ಚಿನ ಭದ್ರತೆಯನ್ನ ಒದಗಿಸಲಾಗಿ.  

ಸಿವಿಲ್ ಪೊಲೀಸರ ಜೊತೆಗೆ ಸಿಆರ್ ಪಿಎಫ್ , ಬಿಎಸ್ ಎಫ್ ಯೋಧರು ಭದ್ರತೆಗೆ ನಿಯೋಜನೆಗೊಂಡಿದ್ದಾರೆ.