Asianet Suvarna News Asianet Suvarna News

ಮಂಡ್ಯ ಡಿಸಿ ವಿರುದ್ಧ ದೂರುಗಳ ಸುರಿಮಳೆ

ಮಂಡ್ಯ ಜಿಲ್ಲಾಧಿಕಾರಿ ವಿರುದ್ಧ ದೂರುಗಳ ಸುರಿಮಳೆಯೇ ಕೇಳಿಬಂದಿದೆ. ಅಲ್ಲದೇ ಹಲವು ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

Loksabha Elections 2019 Alligation Against Mandya DC
Author
Bengaluru, First Published Apr 1, 2019, 7:44 AM IST

ಮಂಡ್ಯ: ಮಂಡ್ಯ ಜೆಡಿಎಸ್ ಅಭ್ಯರ್ಥಿ ನಿಖಿಲ್ ನಾಮಪತ್ರ ವಿವಾದಕ್ಕೆ ಸಂಬಂಧಿಸಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹಾಗೂ ಅವರ ಚುನಾವಣಾ ಏಜೆಂಟ್ ಮದನ್ ಕುಮಾರ್ ಅವರು ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮಂಜುಶ್ರೀ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಡಳಿತ ವ್ಯವಸ್ಥೆಯಲ್ಲಿ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯ ತೋರಿರುವ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಹಾಗೂ ಈ ಕ್ಷೇತ್ರವನ್ನು ಅತ್ಯಂತ ಸೂಕ್ಷ್ಮ ಕ್ಷೇತ್ರವೆಂದು ಪರಿಗಣಿಸಿ ನಿಷ್ಪಕ್ಷಪಾತ ಮತ್ತು ನಿರ್ಭಿತಿಯಿಂದ ಕೆಲಸ ಮಾಡುವ ಜಿಲ್ಲಾಧಿಕಾರಿಯನ್ನು ನೇಮಕ ಮಾಡಬೇಕು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿರು ವುದಾಗಿ ತಿಳಿಸಿದ್ದಾರೆ. 

ಇದೇ ವೇಳೆ ಬಿಎಸ್ಪಿ ಅಭ್ಯರ್ಥಿ ನಂಜುಂಡಸ್ವಾಮಿಯವರೂ ತಮಗೆ ಜಿಲ್ಲಾಧಿಕಾರಿಯವರು ರಾಷ್ಟೀಯ ಪಕ್ಷವಾದ ತಮಗೆ ನಂ.1 ಸಂಖ್ಯೆ ನೀಡದೆ ನಿಖಿಲ್‌ಗೆ ನೀಡಿದ್ದಾರೆ ಎಂದು ಹರಿಹಾಯ್ದಿದ್ದಾರೆ.

ಜತೆಗೆ ಕೇಂದ್ರ ಚುನಾವಣಾ ಆಯೋಗಕ್ಕೂ ಡಿ.ಸಿ. ವಿರುದ್ಧ ಪತ್ರ ಬರೆದಿದ್ದಾರೆ. ಭಾನುವಾರ ಮಾತನಾಡಿದ ಸುಮಲತಾ, ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಲು ಕಷ್ಟವಾದರೆ ಎನ್.ಮಂಜುಶ್ರೀ ವರ್ಗಾವಣೆ ಮಾಡಿಸಿಕೊಂಡು ಹೋಗುವುದೇ ಲೇಸು ಎಂದು ಅಭಿಪ್ರಾಯಪಟ್ಟರು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರೇ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಹಾಗೂ ಆಡಳಿತ ವರ್ಗವನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಅನ್ಯಾಯ ಎಸಗಿದ್ದಾರೆ. 

ಮಂಡ್ಯ ಚುನಾವಣಾಧಿಕಾರಿ ಎನ್.ಮಂಜುಶ್ರೀ, ಚುನಾವಣಾ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರಾ ಅಥವಾ ಸಿಎಂಪುತ್ರನನ್ನು ಗೆಲ್ಲಿಸಲು ಕೆಲಸ ಮಾಡುತ್ತಿ ದ್ದಾರಾ ಎಂಬ ಪ್ರಶ್ನೆ ಉದ್ಭವವಾಗಿದೆ ಎಂದು ವ್ಯಂಗ್ಯವಾಡಿದರು. 

ಮದನ್ ಕುಮಾರ್ ಮಾತನಾಡಿ, ಚುನಾವಣಾಧಿ ಕಾರಿ ಹೇಳುವ ಪ್ರಕಾರ ನಾಮಪತ್ರ ಪರಿಶೀಲನೆಗೆ ಮುಂಚೆ ನಿಖಿಲ್ ಹೊಸ ನಮೂನೆ ಸಲ್ಲಿಸಿದ್ದು, ಪರಿಶೀಲ ನೆ ವೇಳೆ ಅದನ್ನು ನಮಗೆ ತೋರಿಸಿದ್ದರೆ ನಾವು ಯಾವು ದೇ ಆಕ್ಷೇಪಣೆ ಸಲ್ಲಿಸುತ್ತಿರಲಿಲ್ಲ. ಹೀಗಾಗಿ ನಾವು ದೂರು ಕೊಟ್ಟ ನಂತರ ಹೊಸ ನಮೂನೆ ಪಡೆದಿರುವ ಬಗ್ಗೆ ಶಂಕೆ ಇದೆ ಎಂದು ಆರೋಪಿಸಿದರು.

ವಿಡಿಯೋ ಟ್ಯಾಂಪರಿಂಗ್: ನಾಮಪತ್ರ ಪರಿಶೀಲನೆಯವಿಡಿಯೋ ಕೇಳಿದಾಗ ಚುನಾವಣಾ ವೀಕ್ಷಕ ರಂಜಿತ್ ಕುಮಾರ್, ಲಿಖಿತ ರೂಪದಲ್ಲಿ ವಿವರಣೆ ನೀಡಿದ್ದಾರೆ. ನಾಮಪತ್ರ ಪರಿಶೀಲ ನೆ ವೇಳೆ ನೀವು ಆಕ್ಷೇಪಣೆ ವ್ಯಕ್ತಪಡಿಸಿದ ಸಂದರ್ಭದಲ್ಲಿ ಕ್ಯಾಮೆರಾಮನ್ ಬೇರೆಡೆಗೆ ತಿರುಗಿಸಿದ್ದರಿಂದ ಸಂಪೂರ್ಣ ವಿಡಿಯೋ ಚಿತ್ರೀಕರಣವಾಗಿಲ್ಲ. ಆದ್ದರಿಂದ ಕ್ಯಾಮೆರಾಮೆನ್ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ದೂರು
ನೀಡಲಾಗಿದೆ ಎಂದಿದ್ದಾರೆ. ಇದರಲ್ಲಿ ಚುನಾವಣಾಧಿ ಕಾರಿ, ಇತರೆ ಅಧಿಕಾರಿಗಳು ಹೊಣೆಗಾರಿಕೆಯಿಂದ ನುಣುಚಿಕೊಳ್ಳಲು ಕ್ಯಾಮೆರಾಮನ್ ಮೇಲೆ ಆರೋಪ ಹೊರಿಸಲು ಮುಂದಾಗಿದ್ದಾರೆ ಎಂದು ಮದನ್ ಗಂಭೀರ ಆರೋಪ ಮಾಡಿದರು.

Follow Us:
Download App:
  • android
  • ios