ನವದೆಹಲಿ : ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ವಿವಿಧ ರೀತಿಯ ಕಸರತ್ತು ನಡೆಸುತ್ತಿವೆ. 

ಮೊದಲ ಹಂತದ ಚುನಾವಣೆಗೆ 17 ದಿನಗಳು ಬಾಕಿ ಉಳಿದಿದ್ದು, ಮತದಾರರನ್ನು ತಲುಪಲು ವಿವಿಧ ರೀತಿಯಲ್ಲಿ ಪಕ್ಷಗಳು ಹೆಚ್ಚಿನ ಸಮಯ ಕೆಲಸ ನಿರ್ವಹಿಸುತ್ತಿವೆ. 

ಇತ್ತ ಕೇಂದ್ರದಲ್ಲಿ ಆಡಳಿತದಲ್ಲಿರುವ ಬಿಜೆಪಿ ಇದೀಗ ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರಕ್ಕೆ ಏರುವ  ಭರವಸೆ ಹೊಂದಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವ ನಿರೀಕ್ಷೆಯಲ್ಲಿದೆ. 

ಇತ್ತ ವಿಪಕ್ಷ ಒಕ್ಕೂಟಗಳು ಅಧಿಕಾರ ಗದ್ದುಗೆಗೆ ಏರುವ ಯತ್ನ ಮಾಡುತ್ತಿವೆ. ರಾಹುಲ್ ದೇಶದ ಚುಕ್ಕಾಣಿ ಹಿಡಿಯುವ ಯತ್ನ ನಡೆಸುತ್ತಿದ್ದಾರೆ. 

ಸ್ಥಳೀಯ ಪಕ್ಷಗಳೋಂದಿಗೆ ಮೈತ್ರಿ ಮಾಡಿಕೊಂಡು ಬಲ ಹೆಚ್ಚಿಸಿಕೊಳ್ಳುತ್ತಿರುವ ಕಾಂಗ್ರೆಸ್  ತೆಕ್ಕೆಗೆ ಇದೀಗ ಇನ್ನೊಂದು ಪಕ್ಷ ಸೇರುವ ಸಾಧ್ಯತೆ ಇದೆ. 

ನವದೆಹಲಿಯಲ್ಲಿ ಆಪ್ ಜೊತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. 

ದಿಲ್ಲಿಯಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದರಿಂದ ಇನ್ನಷ್ಟು ಬಲ ಬಂದಂತಾಗಲಿದೆ. 

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ