ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ವಿವಿಧ ಪಕ್ಷಗಳಲ್ಲಿ ಮುಖಂಡರ ಪಕ್ಷಾಂತರ ಜೋರಾಗಿದೆ. ಇದೀಗ ಬಿಜೆಪಿ ಮುಖಂಡರೋರ್ವರು ಪಕ್ಷ ತೊರೆದು ಜೆಡಿಎಸ್ ಸೇರಿದ್ದಾರೆ. 

ತುರುವೇಕೆರೆ : ಮಾಜಿ ಶಾಸಕ ಎಚ್‌.ಬಿ. ನಂಜೇಗೌಡ ಅವರು ಬಿಜೆಪಿ ತೊರೆದು ಭಾನುವಾರ ಜೆಡಿಎಸ್‌ ಸೇರ್ಪಡೆಗೊಂಡಿದ್ದಾರೆ. 

ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಮನೆಗೆ ವಿಧಾನ ಪರಿಷತ್‌ ಸದಸ್ಯ ಬೆಮಲ್‌ ಕಾಂತರಾಜ್‌ರೊಂದಿಗೆ ತೆರಳಿದ ನಂಜೇಗೌಡರು ಮಾತೃ ಪಕ್ಷ ಜೆಡಿಎಸ್‌ಗೆ ಸೇರ್ಪಡೆಗೊಂಡರು. 

ಈ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ರಾಜಕೀಯ ಗುರು ದೇವೇಗೌಡರೇ ತಮ್ಮ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿರುವುದರಿಂದ ಅವರ ಗೆಲುವಿಗೆ ಶ್ರಮಿಸುವುದು ನನ್ನ ಕರ್ತವ್ಯ. 

ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ದೇವೇಗೌಡರು ಶ್ರಮಿಸಲಿದ್ದಾರೆ. ಅವರ ಗೆಲುವು ನೂರಕ್ಕೆ ನೂರು ಖಚಿತ. ಅವರು ಸ್ಪರ್ಧಿಸುತ್ತಿರುವುದರಿಂದ ಜೆಡಿಎಸ್‌ ಕಾರ್ಯಕರ್ತರಿಗೆ ಹೊಸ ಉತ್ಸಾಹ ಮೂಡಿದೆ ಎಂದರು.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ