ಗಂಗಾವತಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ 150 ಸ್ಥಾನಗಳು ಮಾತ್ರ ಲಭ್ಯವಾಗುತ್ತದೆ ಎಂದು ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಭವಿಷ್ಯ ನುಡಿದಿದ್ದಾರೆ. 

ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಸುಳ್ಳಗಾರನೆಂದು ಎಲ್ಲರಿಗೆ ಗೊತ್ತಿದೆ. ಈ ಕಾರಣಕ್ಕೆ ಈ ಭಾರಿ ಬಿಜೆಪಿ ವಿರುದ್ಧ ಮತ ಚಲಾಯಿಸುತ್ತಿರುವುದರಿಂದ 150 ಸ್ಥಾನಕ್ಕೆ ಮಾತ್ರ ಬಿಜೆಪಿ ಸಂತಸ ಪಡಬೇಕಾಗಿದೆ ಎಂದರು. 

ಆಂಧ್ರ ಪ್ರದೇಶದಲ್ಲಿ ಕಾಂಗ್ರೆಸ್‌ ಜತೆ ಹೊಂದಾಣಿಕೆ ಮಾಡಿಲ್ಲವಾದರೂ ಕರ್ನಾಟಕದಲ್ಲಿ ಪ್ರಚಾರಕ್ಕೆ ಬಂದಿರಲ್ಲ ಎಂಬ ಪ್ರಶ್ನೆಗೆ, ಇದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಜತೆಗೆ ಚರ್ಚಿಸಿ ಹೊಂದಾಣಿಕೆ ಮಾಡಿಕೊಳ್ಳಲಾಗಿದೆ. ರಾಹುಲ್ ಗಾಂಧಿಯ ದಿಟ್ಟ ನಿರ್ಧಾರದಿಂದ ಹೊಂದಾಣಿಕೆಯಾಗಿದೆ ಎಂದರು.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏ.18ರಂದು ಮುಗಿದಿದ್ದು,ಏ.23ರಂದು ಎರಡನೇ ಹಂತದ ಮತದಾನ ನಡೆಯಲಿದೆ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.