ಚಿಕ್ಕಮಗಳೂರು  : ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಇನ್ನೊಂದು ವಾರವಷ್ಟೇ ಬಾಕಿ ಉಳಿದಿದೆ.  ವಿವಿಧ ಪಕ್ಷಗಳಲ್ಲಿ ನಾಯಕರು ಗೆಲುವಿಗಾಗಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. 

ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಾತನಾಡಿ ಈ ಬಾರಿ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲುವ ಭರವಸೆ ವ್ಯಕ್ತಪಡಿಸಿದ್ದಾರೆ.  ಅಲ್ಲದೇ ಕಳೆ ಬಾರಿಗಿಂತ ಈ ಬಾರಿ ಮೋದಿ ಅಲೆ ಹೆಚ್ಚಾಗಿದ್ದು, ದೇಶದಲ್ಲಿ 300 ಕ್ಕಿಂತ ಹೆಚ್ಚು ಸ್ಥಾನದಲ್ಲಿ ಗೆಲ್ಲಲಿದೆ. ರಾಜ್ಯದಲ್ಲಿ 22 ಕ್ಕೂ ಹೆಚ್ಚು ಸ್ಥಾನದಲ್ಲಿ ಗೆಲುವು ಪಡೆಯಲಿದೆ ಎಂದು ಹೇಳಿದ್ದಾರೆ. 

ಸಿಎಂ ಕುಮಾರಸ್ವಾಮಿ ಘೋಷಣೆ ಮಾಡಿದ ಸಾಲಮನ್ನಾ ಯೋಜನೆ ಇನ್ನು ಜಾರಿಗೆ ಬಂದಿಲ್ಲ.  ಸಾಲಮನ್ನಾದಲ್ಲಿ ಸತ್ಯಾಂಶವನ್ನು ಒಪ್ಪಿಕೊಳ್ಳಲು ಸಿದ್ದವಿಲ್ಲ. ಆದರೆ ಪ್ರಧಾನಿ ನರೇಂದ್ರ ಮೋದಿಯವರನ್ನು ಟೀಕಿಸುವ  ಹಂತಕ್ಕೆ ಅವರು ಹೋಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಕಳೆದ 2014ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 18 ಸ್ಥಾನಗಳನ್ನು ಪಡೆದುಕೊಂಡಿದ್ದು, ದೇಶದಲ್ಲಿ 282 ಸ್ಥಾನಗಳಲ್ಲು ಗೆಲುವು ಪಡೆದಿತ್ತು. ಹೆಚ್ಚು ಬಹುಮತಗಳ ಮೂಲಕ ಸರ್ಕಾರ ರಚಿಸಿದ್ದು, ಇದೀಗ ಮತ್ತೊಮ್ಮೆ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಗದ್ದುಗೆಗೆ ಏರಲಿದೆ ಎಂದು ನಾಯಕರು ಭರವಸೆ ವ್ಯಕ್ತಪಡಿಸಿದ್ದಾರೆ. 

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.