ಹುಬ್ಬಳ್ಳಿ: ಮಂಡ್ಯದಲ್ಲಿ ಸುಮಲತಾ ತೋರುತ್ತಿರುವ ಪ್ರಬುದ್ಧ ರಾಜಕಾರಣದಿಂದ ಹಾಗೂ ಪುತ್ರ ನಿಖಿಲ್ ಸೋಲಬಹುದು ಎಂಬ ಭಯ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಆವರಿಸಿದೆ. ಹೀಗಾಗಿ ಕುಮಾರಸ್ವಾಮಿ ಮಂಡ್ಯ ಬಿಟ್ಟು ಬೇರೆ ಕಡೆ ಪ್ರಚಾರಕ್ಕೆ ಬರುತ್ತಿಲ್ಲ. ಇನ್ನು, ಉತ್ತರ ಕರ್ನಾಟಕ ಭಾಗಕ್ಕೆ ಬರುವ ಮಾತೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದರು. 

ಹುಬ್ಬಳ್ಳಿಯಲ್ಲಿ ಮಹಿಳಾ ಮೋರ್ಚಾದ ಸಮಾವೇಶದಲ್ಲಿ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಸುಮಲತಾ ಪ್ರೌಢ ರಾಜಕಾರಣಿಯಂತೆ ನಡೆಯುತ್ತಿದ್ದಾರೆ. ಅವರ ಹೇಳಿಕೆಗಳು ಪ್ರಬುದ್ಧತೆಯಿಂದ ಕೂಡಿವೆ. ಅವರಿಗೆ ಸಿಗುತ್ತಿರುವ ಜನಬೆಂಬಲವೂ ಅಪಾರವಾಗಿದೆ. ಇದು ಸಿಎಂ ಕುಮಾರಸ್ವಾಮಿ ಭಯಕ್ಕೆ ಕಾರಣವಾಗಿದೆ ಎಂದರು.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ