ಬೆಂಗಳೂರು :  ಮತದಾನದ ದಿನ ಸಾಮಾಜಿಕ ಜಾಲತಾಣಗಳ ಮೂಲಕ ಚುನಾವಣಾ ಪ್ರಚಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾಧಿಕಾರಿಗಳು ಸಿದ್ದಾಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಾದರಿ ಚುನಾವಣಾ ನೀತಿ ಸಂಹಿತೆ ಪ್ರಕಾರ ಮತದಾನದ ದಿನ ಪ್ರಚಾರ ಮಾಡುವಂತಿಲ್ಲ. ಆದರೆ, ಅಭ್ಯರ್ಥಿ ತೇಜಸ್ವಿ ಸೂರ್ಯ, ತಾವು ಮತದಾನ ಮಾಡಿದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದನ್ನು ಹರಿಬಿಟ್ಟಿದ್ದು, ಅದರಲ್ಲಿ ನಾನು ಮತದಾನ ಮಾಡಿದ್ದೇನೆ, ನೀವು ಮತದಾನ ಮಾಡಿ ನರೇಂದ್ರ ಮೋದಿ ಅವರನ್ನು ಗೆಲ್ಲಿಸಿ, ಭಾರತವನ್ನು ಗೆಲ್ಲಿಸಿ ಎಂದು ಪ್ರಚಾರ ಮಾಡಿದ್ದಾರೆ.

ಈ ಆರೋಪ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳು ದೂರು ನೀಡಿದ್ದಾರೆ ಎಂದು ಸಿದ್ದಾಪುರ ಪೊಲೀಸರು ಮಾಹಿತಿ ನೀಡಿದ್ದಾರೆ.