ಮೈಸೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಪರಾಭವ ಅನುಭವಿಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಈ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ ಬಳಿಕ ಇದೀಗ ತಮ್ಮ ರಾಜಕೀಯದ ಬಗ್ಗೆ ಮತ್ತೊಂದು ಹೊಸ ಸುಳಿವು ನೀಡಿದ್ದಾರೆ. 

ಆದರೆ ತಾವು ಚಾಮುಂಡೇಶ್ವರಿಯಿಂದ ಮಾತ್ರವೇ ಸ್ಪರ್ಧೆ ಮಾಡುವುದಿಲ್ಲ. ಆದರೆ ಬೇರೆ ಕಡೆ ನಿಲ್ಲುವುದಿಲ್ಲ ಎಂದು ಹೇಳಿಲ್ಲ ಎಂದಿದ್ದಾರೆ. 

ರಾಜ್ಯದಲ್ಲಿ ಮತ್ತೆ ಚುನಾವಣೆ ನಡೆಯಲು ನಾಲ್ಕು ವರ್ಷಗಳು ಬಾಕಿ ಉಳಿದಿದೆ. ಮುಂದೆ ಚುನಾವಣೆ ಬಗ್ಗೆ ಚಿಂತಿಸೋಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. 

ಆದರೆ ಚಾಮುಂಡೇಶ್ವರಿ ಕ್ಷೇತ್ರದ  ಋಣ ತಮಗೆ ಮುಗಿದಿದೆ ಎಂದು ಮೈಸೂರಿನಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಸಿದ್ದರಾಮಯ್ಯ ಹೇಳಿದರು.

ದೇಶದಲ್ಲಿ ಏ.11ರಿಂದ ಮೇ.19ರವೆರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.