ತುಮಕೂರು :  ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು, ಇದೇ ವೇಳೆ ದೇವೇಗೌಡರು ತುಮಕೂರಿನಿಂದಲೂ ಕಣಕ್ಕೆ ಇಳಿಯಬಹುದು ಎನ್ನುವ ಮಾತುಗಳು ಕೇಳಿ ಬಂದ ಹಿನ್ನೆಲೆ ಜಿಲ್ಲೆಯ ಕಾಂಗ್ರೆಸ್ ಮುಖಂಡರು ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ. 

ತುಮಕೂರಲ್ಲಿ ದೇವೇಗೌಡರು ನಿಂತರೇ ಸೊಲಿಸುತ್ತೇವೆ ಎಂದು ಯೂತ್ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷ ರಾಜೇಂದ್ರ ಹೇಳಿದ್ದಾರೆ. 

ಲೋಕಸಭಾ ಚುನಾವಣೆ: ಡಿ.ಕೆ. ಶಿವಕುಮಾರ್ ಗೆ ಡಿಮ್ಯಾಂಡಪ್ಪೊ ಡಿಮ್ಯಾಂಡು..!

ಹಾಲಿ‌ ಸದಸ್ಯ ಮುದ್ದ ಹನುಮೇಗೌಡರಿಗೆ ಟಿಕೆಟ್ ನೀಡಬೇಕು. ಎಲ್ಲರಿಗೂ ಟಿಕೆಟ್ ನೀಡಿ ಇವರಿಗೆ ತಪ್ಪಿಸುವುದು ಏನಿದೆ ಎಂದು ಪ್ರಶ್ನೆ ಮಾಡಿದ್ದು, ನಮ್ಮ ಜಿಲ್ಲೆಗೆ ಸಮ್ಮಿಶ್ರ ಸರ್ಕಾರದ ನೀತಿ ಅನ್ವಯವಾಗಲ್ಲ ಎಂದಿದ್ದಾರೆ. 

ಹೈ ಕಮಾಂಡ್ ನಿರ್ಧಾರ ಅವರೇ ಸ್ವಾಗತಿಸಬೇಕು. ನಾವು ಸ್ವಾಗತ ಮಾಡುವುದಿಲ್ಲ. ಯಾರನ್ನು ಗೆಲ್ಲಿಸಬೇಕು ಎನ್ನುವುದನ್ನು ವೈಯಕ್ತಿಕವಾಗಿ ನಿರ್ಧಾರ ಮಾಡುತ್ತೇವೆ. ದೇವೇಗೌಡರು ಇಲ್ಲಿಗೆ ಬಂದರೆ ಸೋಲಿಸುತ್ತೇವೆ ಎಂದು ಹೇಳಿದ್ದಾರೆ. 

ಕರ್ನಾಟಕದಲ್ಲಿ ಎರಡು ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಏಪ್ರಿಲ್ 18 ರಂದು ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದ್ದು, 2ನೇ ಹಂತದ ಚುನಾವಣೆ ಏಪ್ರಿಲ್ 23 ರಂದು ನಡೆಯಲಿದೆ. ಮೇ 23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.