ಕಾಂಗ್ರೆಸ್ ಎರಡನೇ ಪಟ್ಟಿಯಲ್ಲಿ 21 ಅಭ್ಯರ್ಥಿಗಳಿಗೆ ಟಿಕೆಟ್!
ನವದೆಹಲಿ[ಮಾ.14]: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ 21 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ.
ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ರಾಜ್ ಬಬ್ಬರ್ ಮೊರಾದಾಬಾದ್‌ನಿಂದ, ಕೇಂದ್ರದ ಮಾಜಿ ಸಚಿವ ಶ್ರೀಪ್ರಕಾಶ್ ಜೈಸ್ವಾಲ್ ಕಾನ್ಪುರದಿಂದ, ಮಾಜಿ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಸೊಲ್ಹಾಪುರ ಹಾಗೂ ಪ್ರಿಯಾ ದತ್ ಮುಂಬೈ ಉತ್ತರ- ಕೇಂದ್ರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
Scroll to load tweet…
2ನೇ ಪಟ್ಟಿಯಲ್ಲಿ ಉತ್ತರ ಪ್ರದೇಶದ 16, ಮಹಾರಾಷ್ಟ್ರದ ಐವರಿಗೆ ಟಿಕೆಟ್ ನೀಡಲಾಗಿದೆ. ಸೋನಿಯಾ ಸೇರಿ 15 ಅಭ್ಯರ್ಥಿಗಳನ್ನು ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ ಪ್ರಕಟಿಸಿತ್ತು.
