ಕಾರವಾರ: ಉತ್ತರಕನ್ನಡ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಆನಂದ್ ಅಸ್ನೋಟಿಕರ್ ಗೆಲುವಿಗೆ ಸಚಿವ ದೇಶಪಾಂಡೆ ಅವರೇ ಜವಾಬ್ದಾರರು ಎಂದು ಹೇಳುವ ಮೂಲಕ ದೇಶಪಾಂಡೆಯವರನ್ನು ಪ್ರಚಾರದಲ್ಲಿ ಸಕ್ರಿಯವಾಗಿ ತೊಡಗಿಸುವ ತಂತ್ರವನ್ನು ಮುಖ್ಯಮಂತ್ರಿ ಕುಮಾ ರಸ್ವಾಮಿ ಅನುಸರಿಸಿದ್ದಾರೆ. 

ಕುಮಟಾದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ದೇಶಪಾಂಡೆ ಅವರ ನಾಯಕತ್ವದಲ್ಲೇ ಚುನಾವಣೆ ನಡೆಯುತ್ತಿದೆ. ಅವರು ಪ್ರಚಾರ ನಡೆಸುತ್ತಿದ್ದಾರೆ. ಆನಂದ್ ಗೆಲ್ಲಲಿದ್ದಾರೆ. ಆ ಗೆಲುವಿನಲ್ಲಿ ದೇಶಪಾಂಡೆ ಮಹತ್ತರ ಪಾತ್ರ ವಹಿಸಲಿದ್ದಾರೆ ಎಂದರು. 

ಎರಡು ದಿನಗಳ ಹಿಂದೆ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಅವರೂ ಹೀಗೆ ಹೇಳಿದ್ದರು.