Asianet Suvarna News Asianet Suvarna News

ಸಾಮೂಹಿಕ ರಾಜೀನಾಮೆ ನೀಡಿದ ಹಾಸನ ಕಾಂಗ್ರೆಸ್ ನಾಯಕರು

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಹಾಸನದಲ್ಲಿ ಕಾಂಗ್ರೆಸ್ ನಾಯಕರು ಪಕ್ಷಕ್ಕೆ ಬಿಗ್ ಶಾಕ್ ನೀಡಿದ್ದಾರೆ. ಮಂಥರ್ ಗೌಡ ವಜಾ ಬೆನ್ನಲ್ಲೇ ಸಾಮೂಹಿಕವಾಗಿ ಪಕ್ಷ ತೊರೆದಿದ್ದಾರೆ. 

Loksabha Elections 2019  Hassan Congress Leaders Mass Resigns
Author
Bengaluru, First Published Apr 6, 2019, 1:54 PM IST

ನವದೆಹಲಿ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್ ಎದುರಾಗಿದೆ. 

ಹಾಸನದಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಂಥರ್ ಗೌಡ ವಜಾ ಹಿನ್ನೆಲೆ ಹಲವರು ತಮ್ಮ ಸ್ಥಾನಕ್ಕೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. 

DUCC ಉಪಾಧ್ಯಕ್ಷ ಹಾಗೂ ಇತರೆ ಪದಾಧಿಕಾರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಅರಕಲಗೂಡುತಾಲೂಕು ಘಟಕದ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ರಾಜೀನಾಮೆ ನೀಡಿದ್ದಾರೆ. 

ಕಾಂಗ್ರೆಸ್ ಪಕ್ಷದ ಇತ್ತೀಚಿನ ನಡೆಗಳಿಂದ ಬೇಸತ್ತು ಈ ನಿರ್ಧಾರ ಕೈಗೊಂಡಿದ್ದಾಗಿ ನಾಯಕರು ಹೇಳಿದ್ದಾರೆ. 

ಇನ್ನು ಕಾಂಗ್ರೆಸ್ ನಿಂದ ವಜಾಗೊಂಡಿರುವ ಮಂಥರ್ ಗೌಡ  ತಂದೆ ಎ. ಮಂಜು ಹಾದಿ ತುಳಿಯುವರೇ ಎನ್ನುವ ಪ್ರಶ್ನೆಯೂ ಕೂಡ ಎದುರಾಗಿದೆ. 

ಎ. ಮಂಜು ಕಾಂಗ್ರೆಸ್ ನಲ್ಲಿದ್ದು, ಇತ್ತೀಚೆಗಷ್ಟೇ ಬಿಜೆಪಿಗೆ ಸೇರ್ಪಡೆಯಾಗಿದ್ದು, ಹಾಸನ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿದ್ದಾರೆ. 

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. 543 ಲೋಕಸಭಾ ಕ್ಷೇತ್ರಗಳಿಗೆ ನಡೆ

Follow Us:
Download App:
  • android
  • ios