ಬೆಂಗಳೂರು :  ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಯಾಗಿ ಚುನಾವಣೆ ಎದುರಿಸುತ್ತಿವೆ.

ಈ ವೇಳೆ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ವಿರುದ್ಧ ಯಾವುದೇ ಕಾರ್ಯಕರ್ತರು ಅಥವಾ ಮುಖಂಡರು ಮಾತನಾಡಿದರೂ ಪಕ್ಷದಿಂದ ಹೊರ ಹಾಕುತ್ತೇನೆ ಎಂದು ಮಾಜಿ ಪ್ರಧಾನಮಂತ್ರಿ ಎಚ್‌.ಡಿ. ದೇವೇಗೌಡ ಎಚ್ಚರಿಕೆ ನೀಡಿದ್ದಾರೆ. 

ಮೈತ್ರಿ ಅಭ್ಯರ್ಥಿಯ ವಿರುದ್ಧ ಯಾರೂ ಮಾತನಾಡಬಾರದು. ಎರಡೂ ಪಕ್ಷದವರು ಕುಳಿತು ಬೂತ್‌ಮಟ್ಟದಲ್ಲಿ ಕೆಲಸ ಮಾಡಬೇಕು. ರಾಷ್ಟ್ರದ ಭವಿಷ್ಯ ರೂಪಿಸಲು 21 ಕ್ಕೂ ಹೆಚ್ಚು ಸ್ಥಾನ ಗೆಲ್ಲಬೇಕು. ಯಾರು ಏನೇ ಹೇಳಿದರೂ ನಾವು ಕುಗ್ಗಬಾರದು. ಎಲ್ಲಾ ವೈಮನಸ್ಯ ಬದಿಗಿರಿಸಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.